ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಒಳ ಮೀಸಲಾತಿಯನ್ನು (Reservation) ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಲಾಗಿದೆ. ಕೂಡಲೆ ಈ ವರ್ಗೀಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ಬಂಜಾರ ಸಮಾಜ, ಗೋರ ಸೇನಾ ಸಂಘಟನೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿತು.
ಪ್ರತಿಭಟನಾಕಾರರ ಆಗ್ರಹಗಳೇನು?
ಒಳ ಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ. ಯಾವುದೇ ಸಮುದಾಯಕ್ಕು ಅನ್ಯಾಯವಾಗದೆ ಮೀಸಲು ನಿಗದಪಡಿಸಬೇಕು.
ಬೇಡ, ಜಂಗಮ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ಬಿಜೆಪಿ ಸರ್ಕಾರ ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡಲು ತೀರ್ಮಾನಿಸಲಾಗಿತ್ತು. ಆದರೆ ಈಗ ಆ ಸಮುದಾಯವನ್ನು ನಮ್ಮ ಜೊತೆಗೆ ಸೇರಿಸಲಾಗಿದೆ.

ನಾಗಮೋಹನ ದಾಸ್ ಆಯೋಗ ನೀಡಿದ ವರದಿಯಲ್ಲಿ ಬಂಜಾರ ಸಮುದಾಯದ ಜನಸಂಖ್ಯೆಯನ್ನು ತಪ್ಪಾಗಿ ತೋರಿಸಲಾಗಿದೆ. ಆಯೋಗದ ವರದಿಯಲ್ಲಿ ಸ್ಪೃಷ್ಯ ಮತ್ತು ಅಸ್ಪೃಷ್ಯ ಎಂದು ವರ್ಗೀಕರಿಸಿರುವುದು ಅವೈಜ್ಞಾನಿಕ.
ಪ್ರತಿಭಟನೆಯಲ್ಲಿ ಜಿಲ್ಲಾ ಬಂಜಾರ ಸಮಾಜದ ಪ್ರಮುಖರಾದ ಮಂಜುನಾಥ್.ಟಿ, ಶಶಿಕುಮಾರ್, ಹನುಮಂತನಾಯ್ಕ, ರೇಣುನಾಯ್ಕ, ನಾನ್ಯಾನಾಯ್ಕ, ಬಸವರಾಜ್‌ನಾಯ್ಕ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ತೀರ್ಥಹಳ್ಳಿಯ ವ್ಯಕ್ತಿಗೆ 20 ವರ್ಷ ಜೈಲು, ₹75,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಏನಿದು ಪ್ರಕರಣ?
Reservation row banjara protest in Shimoga
LATEST NEWS
- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು















