ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಅಕ್ಟೋಬರ್ 2020
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ 14 ದಿನಗಳಿಂದ ನಡೆಸುತ್ತಿದ್ದ ವೈದ್ಯಕೀಯ ಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಹೆಚ್.ವೈ. ವಿಶ್ವಾರಾಧ್ಯ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆರೋಗ್ಯ ಸಚಿವರ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಸಂಘದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಒಂದು ತಿಂಗಳ ಸಮಯ ತೆಗೆದು ಕೊಂಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿ ಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ಸರ್ಕಾರ ಭರವಸೆ ನೀಡಿದ ಹಿನ್ನೆಲೆ ಯಲ್ಲಿ ಎಲ್ಲಾ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಮುಷ್ಕರದ ದಿನಗಳಲ್ಲಿ ಕಡಿತವಾದ ವೇತನವನ್ನು ಪಾವತಿಸಲು ಕ್ರಮ ಕೈಗೊಳ್ಳಲು ಹಾಗೂ ಮುಷ್ಕರದ ಸಮಯದಲ್ಲಿ ಸೇವೆಯಿಂದ ವಜಾಗೊಂಡಿರುವ ನೌಕರರಿಗೆ ನೋಟಿಸ್ ನೀಡಿರುವುದನ್ನು ಹಿಂಪಡೆಯಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಸ್ವಾಮಿ, ಜಿಲ್ಲಾಧ್ಯಕ್ಷೆ ಡಾ.ಹೇಮಲತಾ, ಪ್ರಧಾನ ಕಾರ್ಯದರ್ಶಿ ಹೆಚ್.ಎನ್.ರುದ್ರೇಶ್ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]