ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 22 ಜುಲೈ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಾರ್ವಜನಿಕರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಸಂಘದ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿ ಅದನ್ನು ವಜಾಗೊಳಿಸಬೇಕು ಎಂದು ಜೆಡಿಯು (JDU) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಅವರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ (PROTEST) ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಸರ್ಕಾರಿ ನೌಕರರ ಹಾಗೂ ಅವರ ಕುಟುಂಬಗಳ ಹಿತವನ್ನು ಕಾಪಾಡಿಕೊಂಡು ಬಂದಿವೆ. ಸರ್ಕಾರಿ ನೌಕರರಿಗೆ ಪೂರಕವಾಗಿಯೇ ಎಲ್ಲಾ ಕಾನೂನುಗಳು ಇದೆ. 6 ಲಕ್ಷದಷ್ಟು ಇರುವ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಎಲ್ಲಾ ಅನುಕೂಲವನ್ನು ಸರ್ಕಾರ ಕಲ್ಪಿಸುತ್ತಾ ಬಂದಿದೆ. ಆದರೆ, ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಡವರಿಗೆ ಅನಾವಶ್ಯಕ ವಿಳಂಬವಾದಾಗ ಪ್ರಶ್ನೆ ಮಾಡಿದರೆ ಸರ್ಕಾರಿ ನೌಕರರು ಕರ್ತವ್ಯಕ್ಕೆ ಅಡ್ಡಿ ಎಂದು ದೂರು ದಾಖಲಿಸುವುದು, ಸಾಮೂಹಿಕವಾಗಿ ಪ್ರತಿಭಟನೆ ನಡೆಸುವುದನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಂದಾಯ ಇಲಾಖೆ, ಅಬಕಾರಿ, ಲೋಕೋಪಯೋಗಿ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಸಂಘದ ಪದಾಧಿಕಾರಿಗಳು ಪ್ರಭಾವಿಗಳಾದ್ದರಿಂದ ಭ್ರಷ್ಟ ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ಬಗ್ಗದೇ ತಮ್ಮ ಭ್ರಷ್ಟಾಚಾರ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಮತ್ತು ವಿಡಿಯೋ ಮಾಡುವುದು ನಿಷೇಧಿಸಿ ಆದೇಶ ಹೊರಡಿಸಿದ್ದು, ಸಾರ್ವಜನಿಕರ ವಿರೋಧದ ನಂತರ ವಾಪಸ್ ಪಡೆಯಲಾಗಿದೆ ಎಂದರು.
7 ಕೋಟಿ ಜನರ ಹಿತ ಕಾಪಾಡುವ ಉದ್ದೇಶದಿಂದ ಸರ್ಕಾರಿ ನೌಕರರ ಸಂಘವನ್ನು ವಜಾ ಮಾಡಬೇಕೆಂದು ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಆಗ್ರಹಿಸಿದ್ದಾರೆ (PROTEST).
ಇದನ್ನೂ ಓದಿ –
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.