ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MAY 2021
ಕಾನೂನು ಸೇವಾ ಪ್ರಧಿಕಾರ, ನಾಗರೀಕರನ್ನು ಒಳಗೊಂಡ ಸಮಿತಿ ರಚಿಸಿ, ವಾರಕ್ಕೊಮ್ಮೆ ಕರೋನ ಪರಿಸ್ಥಿತಿ ಅವಲೋಕನ ನಡೆಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶಿವಮೊಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಒಕ್ಕೂಟದ ಸದ್ಯಸರು, ಮೆಗ್ಗಾನ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‍ಗಳ ಸಂಖ್ಯೆಯನ್ನು 32ರಿಂದ 300ಕ್ಕೆ ಹೆಚ್ಚಳ ಮಾಡಬೇಕು. ಹೆಚ್‍ಎಫ್‍ಎನ್‍ಸಿ ಬೆಡ್ ವ್ಯವಸ್ಥೆಯನ್ನು 38ರಿಂದ 300ಕ್ಕೆ ಏರಿಸಬೇಕು. ಇದಕ್ಕೆ ತಕ್ಕಂತೆ ಆಕ್ಸಿಜನ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.
ಇನ್ನು, ವೈದ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಪ್ಯಾರಾಮೆಡಿಕಲ್ ಸ್ಟಾಫ್, ಲ್ಯಾಬ್ ಟೆಕ್ನಿಷಿಯನ್‍ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಅಗತ್ಯವಿರುವಷ್ಟು ಡಿ ಗ್ರೂಪ್ ನೌಕರರನ್ನು ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ವಯೋವೃದ್ಧ ನಿರ್ದೇಶಕರನ್ನು ಬದಲಾಯಿಸಿ
ಸಿಮ್ಸ್ ನಿರ್ದೇಶಕರಿಗೆ ವಯಸ್ಸಾಗಿದೆ. ಅವರ ಬದಲು ಕ್ರಿಯಾಶೀಲವಾಗಿ ಕೆಲಸ ಮಾಡುವ ನಿರ್ದೇಶಕರನ್ನು ನೇಮಿಸಬೇಕು. ನಿರ್ದೇಶಕರು, ಅಧೀಕ್ಷಕರ ನೇಮಕದಲ್ಲಿ ಭುಗಿಲೆದ್ದಿರುವ ಭಿನ್ನಾಭಿಪ್ರಾಯ ಶಮನ ಮಾಡಬೇಕು ಎಂದು ತಿಳಿಸಿದರು.
ಇನ್ನು, ತಾಲೂಕು ಆಸ್ಪತ್ರೆಗಳಲ್ಲಿ ಹೆಚ್ಚಿನ ಬೆಡ್ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ಆಸ್ಪತ್ರೆ ಮೇಲೆ ಬೀಳುತ್ತಿರುವ ಒತ್ತಡವನ್ನು ತಡೆಯಬೇಕು ಎಂದು ಒತ್ತಾಯಿಸಿದರು.
ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕೆ.ಪಿ.ಶ್ರೀಪಾಲ್, ಕೆ.ಟಿ.ಗಂಗಾಧರ್, ಎಂ.ಗುರುಮೂರ್ತಿ, ಕೆ.ಎಲ್. ಅಶೋಕ್, ಡಿ.ಎಸ್.ಶಿವಕುಮಾರ್, ರವಿ ಹರಿಗೆ, ನವುಲೆ ಮಂಜುನಾಥ್, ಮಾಲತೇಶ್ ಬೊಮ್ಮನಕಟ್ಟೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]