ಶಿವಮೊಗ್ಗ: ಕನ್ನಡ ನಾಡು ನುಡಿ ಜಾಗೃತಿ ಸಮಿತಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ ಹೋರಾಟ, ಕನ್ನಡಿಗರ ಜಾಗೃತಿ ಸಮಾವೇಶ ನಡೆಯಿತು. ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಡೊಳ್ಳು ಬಾರಿಸಿ ಚಾಲನೆ ನೀಡಿದರು. (Protest)
‘ತನಿಖಾ ಆಯೋಗ ನೇಮಿಸೇಕಿದೆ‘
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ತನಿಖಾ ಆಯೋಗ ರಚಿಸುವಂತೆ ಆಗ್ರಹಿಸಿದರು. ಇಲ್ಲಿದೆ ಸಾಹಿತಿ ಸಿದ್ದರಾಮಯ್ಯ ಅವರ ಭಾಷಣದ 5 ಪ್ರಮುಖಾಂಶಗಳು.
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರನ್ನು ಅಮಾನತಿನಲ್ಲಿರಿಸಿ, ಸರ್ಕಾರವು ತುರ್ತಾಗಿ ತನಿಖಾ ಆಯೋಗ ನೇಮಿಸಬೇಕಿದೆ. ತನಿಖೆಯಲ್ಲಿ ಕಳಂಕಿತ ಎಂದು ಸಾಬೀತಾದರೆ ವಜಾ ಮಾಡಿ. ಇಲ್ಲವಾದರೆ ಅಮಾನತು ರದ್ದುಪಡಿಸಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ.
ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳನ್ನು ಪಕ್ಷ ರಾಜಕಾರಣದ ಬೇಳೆ ಬೇಯಿಸಿಕೊಳ್ಳುವ ವೇದಿಕೆಯಾಗಿ ಅವಕಾಶ ಮಾಡಬೇಡಿ. ಸಮ್ಮೇಳನಕ್ಕೆ ಖರ್ಚು ಮಾಡುವ ಕೋಟಿಗಟ್ಟಲೆ ಹಣವನ್ನು ಬಡ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಿ.
ಮಹೇಶ್ ಜೋಷಿಗೆ ನೀಡಿದ್ದ ಸಚಿವ ಸ್ಥಾನಮಾನವನ್ನು ತೆಗೆದು ಹಾಕಿದ ಸರ್ಕಾರಕ್ಕೆ ನಮ್ಮ ಅಭಿನಂದನೆ. ಕಸಾಪದಲ್ಲಿ ನಡೆಯುತ್ತಿರುವ ಆತ್ಮಹೀನ ನಡವಳಿಕೆ ನಿಲ್ಲಬೇಕು. ಅಧಿಕಾರಿಗಳು ನಿವೃತ್ತರಾಗಿ ಕಸಾಪದ ರಾಜ್ಯಾಧ್ಯಕ್ಷರಂತಹ ಹುದ್ದೆಗಳಿಗೆ ಹೋದಾಗ ಇಂತಹ ಅನಾಹುತವಾಗುತ್ತದೆ.
ಕಸಾಪ ಚುನಾವಣೆಯ ಕ್ರಮವನ್ನು ಮಾಲಿನ್ಯಗೊಳಿಸಿದ ವ್ಯಕ್ತಿ ಮಹೇಶ್ ಜೋಷಿ. ಪಕ್ಷ ರಾಜಕಾರಣದ ಕೊಳಕನ್ನು ಕಸಾಪಗೆ ತಂದಿದ್ದಾರೆ. ಸಾಹಿತ್ಯಿಕ ಮನಸ್ಸು ಇಲ್ಲದವರಲ್ಲಿ ಸರ್ವಾಧಿಕಾರದ ಧೋರಣೆ ಇರುತ್ತದೆ.
ಶಿವಮೊಗ್ಗ ಜಿಲ್ಲೆಯ ಪ್ರಜಾಸತಾತ್ಮಕವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರ ಮೂಲ ಸದಸ್ಯತ್ವವನ್ನೆ ಕಿತ್ತುಹಾಕುವ ದುರಾಹಂಕಾರದ ಠೇಂಕಾರದ ವಿರುದ್ಧ ನಾವೆಲ್ಲ ಹೋರಾಡಬೇಕಿದೆ. ನಮ್ಮ ಹೋರಾಟ ಸತ್ಯಾಗ್ರಹಕ್ಕೆ ಪೂರಕವಾಗಿದೆ.
ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶಗೌಡ, ರೈತ ನಾಯಕಿ ಸುನಂದ ಜಯರಾಮ್, ಸಾಹಿತಿ ಜಾಣಗೆರೆ ವೆಂಕಟರಾಮಯ್ಯ, ಹೋರಾಟಗಾರ್ತಿ ಕೆ.ಎಸ್.ನಿರ್ಮಲ, ಮೀರಾ ಶಿವಲಿಂಗಯ್ಯ, ಕಲ್ಕುಳಿ ವಿಠಲಹೆಗಡೆ, ಆರ್.ಜೆ.ಹಳ್ಳಿ ನಾಗರಾಜ, ರೋಹಿದಾಸ ನಾಯಕ್ ಮಾತನಾಡಿದರು.
ಸಮಾಜವಾದಿ ನಾಯಕ ಪಿ.ಪುಟ್ಟಯ್ಯ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಡಾ.ಹೆಚ್.ಟಿ.ಕೃಷ್ಣಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಸಂಚಾಲಕ ಕೆ.ಪಿ.ಶ್ರೀಪಾಲ್ ಸ್ವಾಗತಿಸಿದರು. ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕ ಡಾ.ಹೆಚ್.ಟಿ.ಕೃಷ್ಣಮೂರ್ತಿ, ಅಕ್ಷತಾ ಹುಂಚದಕಟ್ಟೆ ಉಪಸ್ಥಿತರಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಕ್ರೀದ್, ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200