ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 23 ಡಿಸೆಂಬರ್ 2019
ಶಿವಮೊಗ್ಗಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರು ತಡೆದು, ಪ್ರತಿಭಟನೆ ನಡೆಸಲು ಸಜ್ಜಾಗಿದ್ದ ಕೆಲವು ಕಾಂಗ್ರೆಸ್ ಕಾರ್ಯಕರ್ತರನ್ನು ಅರೆಸ್ಟ್ ಮಾಡಲಾಗಿದೆ. ಸಾಗರ ರಸ್ತೆಯಲ್ಲಿರುವ ಐಬಿ ಬಳಿಕ ಘಟನೆ ನಡೆದಿದೆ.
ಬೆಳಗ್ಗೆ ಹೆಲಿಪ್ಯಾಡ್’ಗೆ ಆಗಮಿಸಿದ್ದ ಸಿಎಂ, ಕೆಲಕಾಲ ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬಳಿಕ ಪಿಇಎಸ್ ಕಾಲೇಜಿಗೆ ತೆರಳಬೇಕಿತ್ತು. ಈ ವೇಳೆ ಸಾಗರ ರಸ್ತೆಯಲ್ಲಿ ಗುಂಪೊಂದು ಸಿಎಂ ಕಾರು ತಡೆದು, ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿತ್ತು.
ಮುನ್ಸೂಚನೆ ಸಿಗುತ್ತಿದ್ದಂತೆ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಗ್ರಾಮಾಂತರ ಪಿಎಸ್ಐ ಮಂಜುನಾಥ ನೇತೃತ್ವದಲ್ಲಿ, ಪೊಲೀಸರು ಪ್ರತಿಭಟನೆಗೆ ಸಜ್ಜಾಗಿದ್ದ ಗುಂಪನ್ನು ಬಂಧಿಸಿತು. ಈ ವೇಳೆ ಕಾಂಗ್ರೆಸ್ ಪಕ್ಷದ ಪರವಾಗಿ ಘೋಷಣೆ ಕೂಗಿದ ಗುಂಪು, ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Police Arrested the protesters who planned to protest against Chief Minister Yedyurappa in Shimoga
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422