ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 27 ನವೆಂಬರ್ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿವಿಧ ಬೇಡಿಕೆ ಈಡೇರಿಸುವಂತೆ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದಾರೆ. ಜಿಲ್ಲೆಯ ವಿವಿಧ ಕಾಲೇಜುಗಳ ನೂರಕ್ಕೂ ಹೆಚ್ಚು ಉಪನ್ಯಾಸರು ಧರಣಿಯಲ್ಲಿ ಭಾಗವಹಿಸಿದ್ದಾರೆ.
ಧರಣಿಗೇನು ಕಾರಣ?
ಪಿಯು ಕಾಲೇಜು ಉಪನ್ಯಾಸಕರ ವೇತನ ತಾರತಮ್ಯ ಸರಿಪಡಿಸಬೇಕು, ಕಾರ್ಯಭಾರದ ಕುರಿತು ಸಮಿತಿ ರಚಿಸಬೇಕು, 2008ರ ನಂತರ ಅಯ್ಕೆಯಾದ ಉಪನ್ಯಾಸಕರಿಗೆ ನೀಡುತ್ತಿರುವ 500 ರೂ. ಎಕ್ಸ್’ಗ್ರೇಷಿಯಾವನ್ನು ಮೂಲವೇತನದಲ್ಲಿ ಸೇರಿಸುವುದು ಸೇರಿದಂತೆ 19 ಬೇಡಿಕೆಗಳನ್ನು ಮುಂದಿಟ್ಟು ಧರಣಿ ನಡೆಸುತ್ತಿದ್ದಾರೆ.
ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆ
ಇನ್ನು, ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೆ ಹೋದರೆ, ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಉಪನ್ಯಾಸಕರು ಎಚ್ಚರಿಕೆ ನೀಡಿದ್ದಾರೆ. ‘ಮೌಲ್ಯಮಾಪನ ಬಹಿಷ್ಕರಿಸಿದಾಗ ಪ್ರತಿ ವರ್ಷವು ಜನರು ಬೆಂಬಲ ನೀಡುವುದಿಲ್ಲ. ಮಕ್ಕಳ ಭವಿಷ್ಯವನ್ನು ಮುಂದಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡ್ತಾರೆ ಅಂತಾ ಆರೋಪಿಸುತ್ತಾರೆ. ಆದರೆ ಪ್ರತಿ ವರ್ಷವು ನಾವು ಬೇಡಿಕೆ ಇಟ್ಟಾಗಲು ಸರ್ಕಾರ ಈಡೇರಿಸುತ್ತಿಲ್ಲ. ನಮ್ಮ ಸಮಸ್ಯೆಗೆ ಪರಿಹಾರ ಸಿಗುವುದು ಯಾವಾಗ’ ಎಂದು ಪ್ರಶ್ನಿಸುತ್ತಾರೆ ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಯೋಗೀಶ್.
ಕಾರ್ಯದರ್ಶಿ ಡಾ.ಕಲೀಮುಲ್ಲಾ, ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಪಿಯು ಕಾಲೇಜಿನ ಉಪನ್ಯಾಸಕರು ಧರಣಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
PUC Lecturers protest in Shimoga over various demands. Over Hundred lecturers protest in front of DC Office.