ಶಿವಮೊಗ್ಗದ ಪೊಲೀಸ್‌ ಠಾಣೆಯಲ್ಲಿ 88 ದ್ವಿಚಕ್ರ ವಾಹನಗಳು ಹರಾಜು, ಯಾವಾಗ?

ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಜಪ್ತಿ ಮಾಡಿ ಅಮಾನತ್ತುಪಡಿಸಿಕೊಂಡಿರುವ, ವಾರಸುದಾರರು ಪತ್ತೆಯಾಗದ ಅನುಪಯುಕ್ತ 88 ದ್ವಿಚಕ್ರ ವಾಹನಗಳನ್ನು ವಿಲೇವಾರಿ ಮಾಡಲು ಅಕ್ಟೋಬರ್ 28 ರಂದು ಬಹಿರಂಗ ಹರಾಜು ಮಾಡಲಾಗುತ್ತಿದೆ. (ಈ ಸುದ್ದಿಯನ್ನು ಇನ್ನು 25 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ಈ ಹರಾಜು ಪ್ರಕ್ರಿಯೆ ನಡೆಯಲಿದೆ. ಅಕ್ಟೋಬರ್ 28 ರಂದು ಬೆಳಿಗ್ಗೆ 9 ಗಂಟೆಗೆ ದೊಡ್ಡಪೇಟೆ ಪೊಲೀಸ್ ಠಾಣಾ ಆವರಣದಲ್ಲಿ ನೆರವೇರಲಿದೆ. ಆಸಕ್ತರು ನಿಗದಿತ ಸಮಯಕ್ಕೆ ದೊಡ್ಡಪೇಟೆ ಪೊಲೀಸ್ ಠಾಣಾ ಆವರಣಕ್ಕೆ ಆಗಮಿಸಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Doddapete-Police-Station-Shimoga