ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದಿರುವ ಹಾಗೂ ಅಪೀಲು ಅವಧಿ ಮುಕ್ತಾಯಗೊಂಡಿರುವ 34 ವಾಹನಗಳ ಬಹಿರಂಗ ಹರಾಜು ನಡೆಸಲಾಗುತ್ತಿದೆ. ನವೆಂಬರ್ 28 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 27 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
4ನೇ ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯದ ಆದೇಶದಂತೆ ವಾಹನಗಳ ವಿಲೇವಾರಿಗೆ ಹರಾಜು ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ನವೆಂಬರ್ 28 ರಂದು ಬೆಳಿಗ್ಗೆ 10.30ಕ್ಕೆ ನ್ಯಾಯಾಲಯದ ಆವರಣದಲ್ಲಿ ಬಹಿರಂಗ ಹರಾಜು ಜರುಗಲಿದೆ. ಆಸಕ್ತರು ನಿಗದಿತ ಸಮಯಕ್ಕೆ ನ್ಯಾಯಾಲಯದ ಆವರಣದಲ್ಲಿ ನಡೆಯುವ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ತಿಳಿಸಿದ್ದಾರೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
