SHIVAMOGGA LIVE NEWS | 11 JANUARY 2025
ಶಿವಮೊಗ್ಗ : ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ (Reporter) ಶಶಿಧರ್.ಕೆ.ವಿ (39) ನಿಧನರಾಗಿದ್ದಾರೆ. ತೀವ್ರ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಂಜೆ ಕೊನೆಯುಸಿರೆಳೆದಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಶಿಧಕರ್.ಕೆ.ವಿ. ಕೆಳೆದ ಆರು ವರ್ಷದಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕು ಮೊದಲು ವಿಜಯಪುರ ಜಿಲ್ಲೆಯಲ್ಲಿ ಈಟಿವಿ, ಚಾಮರಾಜನಗರ ಜಿಲ್ಲೆಯಲ್ಲಿ ಸುವರ್ಣ ನ್ಯೂಸ್ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದರು. 16 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.
ಶಶಿಧರ್ ಮೂಲತಃ ಹಾಸನ ಜಿಲ್ಲೆ ಅರಸಿಕೆರೆ ತಾಲೂಕು ಕಲ್ಲಹಳ್ಳಿಯವರು. ಸ್ವಗ್ರಾಮದಲ್ಲಿಯೇ ಶಶಿಧರ್ ಅವರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಕಗಳು ತಿಳಿಸಿವೆ. ಪಾರ್ಥಿವ ಶರೀರವನ್ನು ಕಲ್ಲಹಳ್ಳಿಗೆ ರವಾನಿಸಲಾಗಿದೆ.
ಶಶಿಧರ್ ಅವರ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ. ಶಿವಮೊಗ್ಗ ಪತ್ರಿಕಾ ಭವನದ ಆವರಣದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಹಿರಿಯ ವಕೀಲ ಕೆ.ಪಿ.ಶ್ರೀಪಾಲ್ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.ಪತ್ರಕರ್ತರಿಂದ ಸಂತಾಪ
ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತರಾಗಿದ್ದ ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಅವರ ಅಕಾಲಿಕ ನಿಧನ ಸುದ್ದಿ ತಿಳಿದು ದುಃಖವಾಗಿದೆ. – ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ಶಾಸಕ ಶಿವಮೊಗ್ಗದ ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಶಶಿಧರ್ ಅವರ ಅಕಾಲಿಕ ನಿಧನ ಸುದ್ದಿ ತಿಳಿದು ದುಃಖವಾಗಿದೆ. ಅವರ ಕುಟುಂಬ ವರ್ಗಕ್ಕೆ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. – ಶಾರದಾ ಪೂರ್ಯಾನಾಯ್ಕ್, ಶಿವಮೊಗ್ಗ ಗ್ರಾಮಾಂತರ ಶಾಸಕಿ ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶ್ರೀ ಕೆ.ವಿ ಶಶಿಧರ್ ಅವರ ನಿಧನಕ್ಕೆ ಸಂತಾಪ ಕೋರುವೆ. ಕಳೆದ 16 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. – ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಶಿವಮೊಗ್ಗ ಜಿಲ್ಲೆಯ ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಶಶಿಧರ್ ನಿಧನದ ವಿಷಯ ತಿಳಿದು ಮನಸ್ಸಿಗೆ ಅತೀವ ದುಃಖವನ್ನುಂಟು ಮಾಡಿದೆ. – ಕುಮಾರ್ ಬಂಗಾರಪ್ಪ, ಮಾಜಿ ಸಚಿವಗಣ್ಯರ ಸಂತಾಪ
ಇದನ್ನೂ ಓದಿ » ರಸ್ತೆ ಬದಿ ಕೈಚೀಲದಲ್ಲಿತ್ತು ನವಜಾತ ಗಂಡು ಶಿಶು, ಮುಂದೇನಾಯ್ತು?