ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜೂನ್ 2020
ಕರೋನ ಲಾಕ್ ಡೌನ್‍ನಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಇವತ್ತು ನಡೆಸಲಾಗುತ್ತಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಪರೀಕ್ಷೆ ನಡೆಸಲಾಗುತ್ತಿದೆ.
ಸಾಮಾಜಿಕ ಅಂತರ, ಕಡ್ಡಾಯ ಮಾಸ್ಕ್
ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಕೇಂದ್ರದಲ್ಲಿ ಸಾಮಾಜಿಕ ಅಂತರದ ಬಾಕ್ಸ್‍ಗಳನ್ನು ಹಾಕಲಾಗಿದೆ. ಬಾಕ್ಸ್‍ನಲ್ಲಿ ನಿಂತುಕೊಂಡೇ ಒಳಗೆ ಪ್ರವೇಶ ಮಾಡಬೇಕು. ಅಲ್ಲದೆ ಪರೀಕ್ಷಾ ಕೇಂದ್ರದ ಒಳಗೆ ಬರುವ ಪ್ರತಿ ವಿದ್ಯಾರ್ಥಿಯು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
ಥರ್ಮಲ್ ಸ್ಕ್ಯಾನ್, ಸ್ಯಾನಿಟೈಸರ್
ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ಪಡೆಯುವ ಪ್ರತಿ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ಯಾನ್ ಮಾಡಲಾಗುತ್ತಿದೆ. ಇದಕ್ಕಾಗಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಮತ್ತು ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗುತ್ತಿದೆ. ಇನ್ನು, ಎಲ್ಲಾ ವಿದ್ಯಾರ್ಥಿಗಳಿಗೂ ಸ್ಯಾನಿಟೈಸರ್ ಒದಗಿಸಲಾಗುತ್ತಿದೆ.
ಪರೀಕ್ಷಾ ಕೇಂದ್ರದ ಸುತ್ತಲು ನಿಷೇಧಾಜ್ಞೆ
ಪರೀಕ್ಷಾ ಕೇಂದ್ರದ ಸುತ್ತಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆ ಆಗುವುದನ್ನು ತಪ್ಪಿಸಲು 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ. ಕೆಲವು ಪರೀಕ್ಷಾ ಕೇಂದ್ರದ ಬಳಿ ಬ್ಯಾರಿಕೇಡ್‍ಗಳನ್ನು ಹಾಕಲಾಗಿದೆ. ಇನ್ನು, ಪರೀಕ್ಷಾ ಕೊಠಡಿಯೊಳಗೆ ಯಾರಂದರೆ ಅವರಿಗೆ ಪ್ರವೇಶ ಇಲ್ಲ. ಉಪನ್ಯಾಸಕರು ಕಡ್ಡಾಯವಾಗಿ ಮಾಸ್ಕ್, ಹ್ಯಾಂಡ್ ಗ್ಲೌಸ್ ಹಾಕಿಯೇ ಕಾರ್ಯನಿರ್ವಹಿಸಬೇಕಿದೆ.
KSRTC ಬಸ್ಸುಗಳಲ್ಲಿ ವಿದ್ಯಾರ್ಥಿಗಳು
ಶಿವಮೊಗ್ಗ ಜಿಲ್ಲೆಯಲ್ಲಿ 18,799 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು 129 ರೂಟ್‍ಗಳಲ್ಲಿ 133 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಬಸ್ಸಿನಲ್ಲಿ ವಿದ್ಯಾರ್ಥಿಗಳನ್ನು ಸಾಮಾಜಿಕ ಅಂತರದಲ್ಲಿ ಸೀಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422