ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾಧಿಕಾರಿ ಶಿವಕುಮಾರ್, ಜೂನ್ 18ರಂದು ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಎಲ್ಲಾ 33 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ದೇಹದ ತಾಪಮಾನ ಪರೀಕ್ಷಿಸಲು ತಲಾ ಎರಡು ಥರ್ಮಲ್ ಸ್ಕ್ಯಾನರ್ ಒದಗಿಸಬೇಕು ಎಂದರು.
ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳು ಹಾಜರಿದ್ದು ಆರೋಗ್ಯ ಪರಿಶೀಲಿಸಬೇಕು. ಇನ್‍ವಿಜಿಲೇಟರ್‍ಗಳು ಕಡ್ಡಾಯವಾಗಿ ಫೇಸ್ ಶೀಲ್ಡ್, ಎನ್ 95 ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್ ಧರಿಸಿರಬೇಕು. ಪರೀಕ್ಷಾ ಕೇಂದ್ರದ ಸುಪರ್‍ವೈಸರ್‍ಗಳಿಗೆ ಇಂದೇ ಸುರಕ್ಷಾ ಕಿಟ್ ಪೂರೈಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422