ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ | ರಸ್ತೆ ದಾಟುತ್ತಿದ್ದ ವೃದ್ಧೆಯೊಬ್ಬರಿಗೆ ಪಲ್ಸರ್ ಬೈಕ್ (PULSAR BIKE) ಡಿಕ್ಕಿ ಹೊಡೆದು ಬಲಗಾಲಿನ ಮೂಳೆ ಮುರಿದಿದೆ.
.png)
ಚಿನ್ನಮ್ಮ ಎಂಬುವವರು ಗಾಯಗೊಂಡಿದ್ದಾರೆ. ಸಾಗರ ರಸ್ತೆಯಲ್ಲಿರುವ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ಪರೀಕ್ಷೆಗೆ ಚಿನ್ನಮ್ಮ ಅವರು ಆಗಮಿಸಿದ್ದರು. ಚಿಕಿತ್ಸೆ ಬಳಿಕ ಸಾಗರ ರಸ್ತೆಯಲ್ಲಿ ತಮ್ಮ ಸಹೋದರನ ಕಾರು ಹತ್ತಲು ರಸ್ತೆ ದಾಟುತ್ತಿದ್ದರು.
ಈ ವೇಳೆ ಅತಿ ವೇಗವಾಗಿ ಬಂದ ಪಲ್ಸರ್ ಬೈಕ್ (PULSAR BIKE) ಚಿನ್ನಮ್ಮ ಅವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಿನ್ನಮ್ಮ ಅವರ ಬಲಗಾಲಿನ ತೊಡೆಯ ಮೂಳೆ ಮುರಿದಿದೆ. ಹೆಬ್ಬರಳಿಗೆ ಗಾಯವಾಗಿ ರಕ್ತ ಬಂದಿದೆ. ಕೂಡಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಪಲ್ಸರ್ ಬೈಕ್ ಸವಾರನ ವಿರುದ್ಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶೋ ರೂಂನಲ್ಲಿ 2 ಐಫೋನ್’ಗಳು ನಾಪತ್ತೆ, ಸಿಸಿಟಿವಿಯಿಂದ ಹೊರಬಿತ್ತು ಸತ್ಯ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು
















