ಪಲ್ಸ್‌ ಪೋಲಿಯೋ ಲಸಿಕೆ, ಶಿವಮೊಗ್ಗದಲ್ಲಿ ಮಹತ್ವದ ಸಭೆ, ಏನೆಲ್ಲ ಚರ್ಚೆಯಾಯ್ತು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಜಿಲ್ಲೆಯಲ್ಲಿ ಜೂನ್ 28ರಂದು ನಡೆಯಲಿರುವ 2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಸ್. ನಟರಾಜ್ ಮನವಿ ಮಾಡಿದರು.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ನಡೆದ ಸಿಟಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜೂನ್ 28ರ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. 0 ಯಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಅಂದು ಕಡ್ಡಾಯವಾಗಿ ಮತ್ತೊಮ್ಮೆ ಹಾಕಿಸಬೇಕು. ಶಾಲಾ ಕೊಠಡಿ, ಅಂಗನವಾಡಿ ಸೇರಿದಂತೆ ಅಗತ್ಯವಿರುವ ಕಡೆಗಳಲ್ಲಿ ಪೋಲಿಯೋ ಬೂತ್‌ಗಳನ್ನು ತೆರೆಯಲು ವ್ಯವಸ್ಥೆ ಮಾಡಬೇಕು. ಬ್ಯಾನರ್‌ಗಳು ಹಾಗೂ ಕಸದ ಗಾಡಿಗಳ ಆಡಿಯೋ ಜಿಂಗಲ್ಸ್ ಮೂಲಕ ಪ್ರಚಾರ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Pulse-Polio-Meeting-in-Shimoga-Mahanagara-Palike-Hall

ಆರ್‌ಸಿಎಚ್ ಅಧಿಕಾರಿ ಡಾ. ಮಲ್ಲಪ್ಪ ಓ ಮಾತನಾಡಿ, ‘ನಗರದ 69,283 ಮನೆಗಳ 21,873 ಮಕ್ಕಳನ್ನು ಲಸಿಕೆ ನೀಡಲು ಗುರುತಿಸಲಾಗಿದೆ. 5 ಟ್ರಾನ್ಸಿಟ್ ಹಾಗೂ ಮೊಬೈಲ್ ಸೇರಿದಂತೆ ಒಟ್ಟು 115 ಬೂತ್‌ಗಳು ಕಾರ್ಯನಿರ್ವಹಿಸಲಿವೆ. 464 ಲಸಿಕಾ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. ಅಂದು ಬೂತ್‌ಗೆ ಬಾರದೇ ಉಳಿದ ಮಕ್ಕಳಿಗೆ ಜೂನ್ 29, 30 ಮತ್ತು ಜುಲೈ 1 ರಂದು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುವುದು’ ಎಂದರು.

ಸಭೆಯಲ್ಲಿ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕಿ ಡಾ. ಗೀತಾ, ಪಾಲಿಕೆ ಪರಿಸರ ಎಂಜಿನಿಯರ್ ಪ್ರಭಾಕರ್, ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್, ರೋಟರಿ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.