ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (Health and Family Welfare Department) ವತಿಯಿಂದ ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದಲೇ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ (Pulse Polio Vaccine) ನೀಡುವ ಆಂದೋಲನ (Campaign) ಆರಂಭಗೊಂಡಿದೆ. ನಗರ ಹಾಗೂ ಗ್ರಾಮೀಣ ಭಾಗದ ಲಸಿಕಾ ಕೇಂದ್ರಗಳಲ್ಲಿ (Vaccination Centers) ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುತ್ತಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 1,23,388 ಮಕ್ಕಳು ಇದ್ದು, ಎಲ್ಲರಿಗೂ ಲಸಿಕೆ ತಲುಪಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಜಿಲ್ಲಾದ್ಯಂತ 17 ಮೊಬೈಲ್ ಮತ್ತು 36 ಸಂಚಾರಿ ಕೇಂದ್ರಗಳು ಸೇರಿದಂತೆ ಒಟ್ಟು 1,069 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲೂ ಮಕ್ಕಳಿಗೆ ಲಸಿಕೆ ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಆಂದೋಲನದ ಯಶಸ್ಸಿಗಾಗಿ ಒಟ್ಟು 3,889 ಸಿಬ್ಬಂದಿ ನೇಮಿಸಲಾಗಿದ್ದು, ವಿವಿಧ ಸಂಘ-ಸಂಸ್ಥೆಗಳ ಸ್ವಯಂ ಸೇವಕರ ಸೇವೆಯನ್ನೂ ಪಡೆದುಕೊಳ್ಳಲಾಗುತ್ತಿದೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಲು 194 ವೈದ್ಯಕೀಯ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮೇಲ್ವಿಚಾರಕರನ್ನು ಉಸ್ತುವಾರಿಗೆ ನಿಯೋಜಿಸಲಾಗಿದೆ.
