VIRAL PHOTO | ಕೋಟೆ ಮಾರಿಕಾಂಬ ದೇವಿ ಮಡಿಲಲ್ಲಿ ಪುನೀತ್ ರಾಜಕುಮಾರ್ ಫೋಟೊ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 ಮಾರ್ಚ್ 2022

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರ ರಾರಾಜಿಸಿದೆ. ದೇವಿಯ ಮಡಿಲಲ್ಲಿ ಅಪ್ಪು ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಲಾಗಿದೆ.

Shimoga Nanjappa Hospital

ಇವತ್ತು ಗಾಂಧಿ ಬಜಾರ್’ನಲ್ಲಿ ಕೋಟೆ ಶ್ರೀ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಪುನೀತ್ ರಾಜಕುಮಾರ್ ಅಭಿಮಾನಿಗಳು ಅವರ ಭಾವಚಿತ್ರವನ್ನು ದೇವಿಯ ಮುಂದಿರಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಾರಿಕಾಂಬ ದೇವಿಯ ಮಡಿಲಲಲ್ಲಿ ಪುನೀತ್ ರಾಜಕುಮಾರ್ ಅವರ ಫೋಟೊವನ್ನು ಇರಿಸಿ, ಪೂಜೆ ಸಲ್ಲಿಸಿ, ಅವರ ಆತ್ಮಕ್ಕೆ ಶಾಂತಿ ಕೋರಲಾಗಿದೆ. ಈ ಫೋಟೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾವಿರ ಸಾವಿರ ಜನರಿಂದ ದರ್ಶನ

ಜಾತ್ರೆಯ ಮೊದಲ ದಿನವೆ ಕೋಟೆ ಶ್ರೀ ಮಾರಿಕಾಂಬ ದೇವಿಯ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದಾರೆ. ಗಾಂಧಿ ಬಜಾರ್’ನಲ್ಲಿ ಸರತಿ ಸಾಲಿನಲ್ಲಿ ನಿಂತು ಭಕ್ತರು ಮಾರಿಕಾಂಬ ದೇವಿಯ ದರ್ಶನ ಪಡೆಯುತ್ತಿದ್ದಾರೆ.

ರಾತ್ರಿವರೆಗೂ ಗಾಂಧಿ ಬಜಾರ್’ನಲ್ಲಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಕೋಟೆ ಮಾರಿಕಾಂಬ ದೇವಸ್ಥಾನದ ಗುದ್ದುಗೆಗೆ ದೇವಿಯನ್ನು ಕರೆದೊಯ್ದು ಪ್ರತಿಷ್ಠಾಪಿಸಲಾಗುತ್ತದೆ.

KB Prasanna Kumar

ಇದನ್ನೂ ಓದಿ |  ಕೋಟೆ ಮಾರಿಕಾಂಬ, ವಿದ್ಯಾನಗರದ ಜಾತ್ರೆ, ಶಿವಮೊಗ್ಗ ಸಿಟಿ ಜಗಮಗ

ಈ ಮೇಲ್ – shivamoggalive@gmail.com

WhatsApp Number – 7411700200

JNNCE College VTU Ranking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2022

Leave a Comment