ಶಿವಮೊಗ್ಗ ರಂಗಾಯಣದಲ್ಲಿ ಪಪೆಟ್ ಶೋ, ಶಾಲಾ ಮಕ್ಕಳಿಗೆ ಉಚಿತ ಪ್ರವೇಶ, ಏನಿದು ಶೋ? ಸ್ಪೆಷಾಲಿಟಿ ಏನು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020

ಗಣರಾಜ್ಯೋತ್ಸವ ಪ್ರಯುಕ್ತ ಜ.25ರಂದು ಶಿವಮೊಗ್ಗ ರಂಗಾಯಣದಿಂದ ಪ್ಲಾಸ್ಟಿಕ್‌ನ ಅನಾಹುತ ವಿವರಿಸುವ ‘ಪ್ಲಾಸ್ಟಿ ಸಿಟಿ’ ಪಪಟ್ ಶೋ (ಸೂತ್ರಧಾರಿ ಗೊಂಬೆಯಾಟ) ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣದ ನಿರ್ದೇಶಕ ಸಂದೇಶ ಜವಳಿ ತಿಳಿಸಿದರು.

2019 readers copy new

ಅಂದು ಬೆಳಗ್ಗೆ 11ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪ್ರದರ್ಶನ ಏರ್ಪಡಿಸಿದ್ದು ಸಂಜೆ 6.30ಕ್ಕೆ ಸಾರ್ವಜನಿಕರಿಗೆ ಪ್ರದರ್ಶನ ಏರ್ಪಡಿಸಿದ್ದು 20 ರೂ. ಶುಲ್ಕ ನಿಗದಿಪಡಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೆಗ್ಗೋಡಿನ ಶ್ರವಣ ನಿರ್ದೇಶನದ ಓಂದು ಗಂಟೆಯ ಪ್ಲಾಸ್ಟಿ ಸಿಟಿ ನಾಟಕ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ವಿವರಿಸಲಿದೆ. ಸೂತ್ರಧಾರಿ ಗೊಂಬೆಯಾಟದ ಮೂಲಕ ಇದನ್ನು ಪ್ರಸ್ತುತಪಡಿಸುತ್ತಿರುವುದು ವಿಶೇಷವಾಗಿದೆ ಎಂದರು. ಶಿವಮೊಗ್ಗ ರಂಗಾಯಣ ಮಕ್ಕಳ ರಂಗಭೂಮಿ ಚಟುವಟಿಕೆಗೆ ಹೆಚ್ಚು ಒತ್ತು ನೀಡಲಿದೆ. ಮಕ್ಕಳಿಗೆ ರಂಗ ತರಬೇತಿ ಶಿಬಿರ ಏರ್ಪಡಿಸುವ ಜತೆಗೆ ಶಿಕ್ಷಕರಿಗೂ 15 ದಿನಗಳ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 23, 2020

Leave a Comment