ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020
ತಿಥಿ ಕಾರ್ಯಕ್ಕೆ ಶಿವಮೊಗ್ಗಕ್ಕೆ ಬಂದಿದ್ದವರು ಈಗ ಕ್ವಾರಂಟೈನ್‍ಗೆ ಒಳಗಾಗುವಂತೆ ಆಗಿದೆ. ನಗರದ ರವಿ ವರ್ಮ ಬೀದಿಯಲ್ಲಿ ವ್ಯಕ್ತಿಯೊಬ್ಬರ ತಿಥಿ ಕಾರ್ಯಕ್ಕೆ ಮಂಗಳೂರಿನಿಂದ ಬಂದಿದ್ದ ಸಂಬಂಧಿಗಳು ಈಗ ಕ್ವಾಂಟೈನ್‍ಗೆ ಒಳಗಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರವಿ ವರ್ಮ ಬೀದಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಡುವೆ ತಿಥಿ ಕಾರ್ಯಕ್ಕೆ ಮಂಗಳೂರಿನಿಂದ ಕೆಲವರು ಬಂದಿರುವ ಬಗ್ಗೆ ಸ್ಥಳೀಯರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಬಂದ ಆರೋಗ್ಯ ಇಲಾಖೆ ಅಧಿಕಾರಿಗಳು ಕರೋನ ಪರೀಕ್ಷೆ ನಡೆಸಿ, ಕ್ವಾರಂಟೈನ್‍ಗೆ ಒಳಗಾಗುವಂತೆ ಸೂಚಿಸಿದರು. ಮಂಗಳೂರಿನಿಂದ ಬಂದಿದ್ದವರು ಹೋಂ ಕ್ವಾರಂಟೈನ್ ಆಗುತ್ತೇವೆ ಎಂದು ಮನವಿ ಮಾಡಿದರು. ಆದರೆ ಸ್ಥಳೀಯರು ಇವರನ್ನು ರವಿ ವರ್ಮ ಬೀದಿಯ ಮನೆಯಲ್ಲಿ ಕ್ವಾರಂಟೈನ್ ಮಾಡಲು ವಿರೋಧ ವ್ಯಕ್ತಪಡಿಸಿದರು. ಹಾಗಾಗಿ ಸರ್ಕಾರದ ವ್ಯವಸ್ಥೆಯಲ್ಲಿ ಇವರನ್ನು ಕ್ವಾರಂಟೈನ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]