ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಭದ್ರಾವತಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ, ಈ ಹಿಂದೆ ಅವರು ಕೊಟ್ಟ ಭರವಸೆಯ ಕುರಿತು ಕಾಂಗ್ರೆಸ್ ಮುಖಂಡರು ಪ್ರಶ್ನೆ ಎತ್ತಿದ್ದಾರೆ. ಅಡಕೆ ಬೆಳೆಗಾರರಿಗೆ ಅಮಿತ್ ಷಾ ಕೊಟ್ಟ ಭರವಸೆ ಈಡೇರಿಸದ ಕುರಿತು ಉತ್ತರಿಸುವಂತೆ ಆಗ್ರಹಿಸಿದ್ದಾರೆ.
ದಿನಾಂಕ ಪ್ರಕಟಿಸಲಿ ಅಮಿತ್ ಷಾ
ಅಮಿತ್ ಷಾ ಅವರು 2018ರಲ್ಲಿ ತೀರ್ಥಹಳ್ಳಿಗೆ ಭೇಟಿ ನೀಡಿದ್ದಾಗ, ಅಡಕೆ ಬೆಳೆಗಾರರ ಸಮಾವೇಶ ನಡೆಸಿದ್ದರು. ಈ ವೇಳೆ 500 ಕೋಟಿ ವೆಚ್ಚದ ಸಂಶೋಧನಾ ಕೇಂದ್ರ ಸ್ಥಾಪಿಸುವುದಾಗಿ ಭರವಸೆ ನೀಡಿದ್ದರು. ಆ ಭರವಸೆ ಹುಸಿಯಾಗಿದೆ. ನಾಳೆ ಭದ್ರಾವತಿಗೆ ಭೇಟಿ ನೀಡುತ್ತಿರುವ ಅಮಿತ್ ಷಾ ಅವರು ಸಂಶೋಧನಾ ಕೇಂದ್ರ ಆರಂಭಿಸುವ ದಿನಾಂಕ ಪ್ರಕಟಿಸಬೇಕು ಎಂದು ಜಿಲ್ಲಾ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಕೊಟ್ಟ ಭರವಸೆ ನೆನಪು ಮಾಡಿ
2018ರ ಮೇ 4ರಂದು ತೀರ್ಥಹಳ್ಳಿಗೆ ಬಂದಾಗ, ಅಮಿತ್ ಷಾ ಅವರು, ಅಡಕೆ ಬೆಳೆಗಾರರಿಗೆ ಕೊಟ್ಟ ಭರವಸೆಯನ್ನು ಮರೆತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರು ಈ ಭರವಸೆಯನ್ನು ನೆನಪು ಮಾಡಿಕೊಡಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಸಿಗರೇಟ್ ಲಾಬಿಗೆ ಮಣಿದಿರುವ ಕೇಂದ್ರ ಸರ್ಕಾರ ಅಡಕೆ ಹಾನಿಕಾರಕ ಅನ್ನುತ್ತಿದೆ. ಅಡಕೆಯ ಸಂಶೋಧನೆಗೂ ಮುಂದಾಗುತ್ತಿಲ್ಲ. ಇನ್ನಾದರೂ ಈ ಕ್ರಮದ ಕುರಿತು ಸರ್ಕಾರ ಯೋಚಿಸಲಿ ಎಂದು ತೀ.ನಾ.ಶ್ರೀನಿವಾಸ್ ಆಗ್ರಹಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















