ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಪರೇಷನ್ ಸಿಂಧೂರ (Operation Sindoor) ಹೆಸರಿನಲ್ಲಿ ಕಳೆದ ರಾತ್ರಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಕಾರ್ಯಾಚರಣೆ ಕುರಿತು ಸಂಸದ ಬಿ.ವೈ.ರಾಘವೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಘವೇಂದ್ರ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್
ಪಹೆಲ್ಗಾಮ್ನಲ್ಲಿ ಉಗ್ರರು ದಾಳಿಗೆ 26 ಪ್ರವಾಸಿಗರು ಮೃತರಾಗಿದ್ದರು. ಈ ಕಾರಣಕ್ಕೆ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕವಾಗಿ ನಿರ್ಬಂಧ ವಿಧಿಸಿತ್ತು.
ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಮಧ್ಯರಾತ್ರಿ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದಲ್ಲಿರುವ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ.
ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ಇದೆ. ಭಾರತದ ಸೈನಿಕರು ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಲಿದ್ದಾರೆ. ನಿನ್ನೆಯ ದಾಳಿಯಲ್ಲಿ ಸುಮಾರು 50 ರಿಂದ 70 ಉಗ್ರರು ಹತರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ವರದಿಯಾಗುತ್ತಿದೆ.

ಪಾಕಿಸ್ತಾನದ ಸೈನಿಕರ ಮೇಲೆ ದಾಳಿಯಾಗಿಲ್ಲ. ಗುಪ್ತಚರ ಮಾಹಿತಿ ಆಧರಿಸಿ ಉಗ್ರರ ನೆಲೆಗಳನ್ನು ಮಾತ್ರ ಗುರಿಯಾಗಿಸಿಕೊಂಡು 9 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಯಾವುದೇ ಮಸೀದಿ, ನಾಗರಿಕರ ಮೇಲೆ ದಾಳಿಯಾಗಿಲ್ಲ.

ಭಾರತದ ಸಂಸತ್ತಿನ ಮೇಲೆ ದಾಳಿ, ಏರ್ ಬೇಸ್ ಮೇಲೆ ದಾಳಿ ಸೇರಿದಂತೆ ಪದೇ ಪದೆ ದಾಳಿಗಳಾಗುತ್ತಿದೆ. ಶಾಂತಿ ಮಂತ್ರಿ ಪಠಿಸುತ್ತ ಕೂರುವ ಕಾಲ ಇದಲ್ಲ. ಹಾಗಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳಲಾಗಿದೆ.
ಭಾರತದ ಸಿಂಧೂರ ಕಾಶ್ಮೀರ ಎಂದು ಹೇಳುತ್ತಲೆ ಬಂದಿದ್ದೇವೆ. ಕಳೆದ ಎರಡ್ಮೂರು ವರ್ಷದಿಂದ ಗೃಹ ಸಚಿವ ಅಮಿತ್ ಷಾ ಅವರು ಕಾಶ್ಮೀರವನ್ನು ಮರಳಿ ಪಡೆಯುವ ಕುರಿತು ಹೇಳಿಕೆಗಳನ್ನು ನೀಡಿದ್ದರು. ಈಗ ಅದಕ್ಕೆ ಸೂಕ್ತ ಸಂದರ್ಭ ಎದುರಾಗಿದೆ. ನಮ್ಮ ತಾಯಂದಿರು, ಸಹೋದರಿಯರ ಸಿಂಧೂರ ಉಳಿವಿಗಾಗಿ ಆಪರೇಷನ್ ಸಿಂಧೂರ ಆರಂಭಿಸಲಾಗಿದೆ.

ಪಾಕಿಸ್ತಾನ ಯಾವಾಗಲು ಕಳ್ಳ ಹಾದಿಯಲ್ಲಿ ಬಂದು ಭಾರತದ ಮೇಲೆ ದಾಳಿ ನಡೆಸುತ್ತದೆ. ಆದರೆ ಭಾರತ ಪಾಕಿಸ್ತಾನದ ಯಾವುದೇ ನಾಗರಿಕರಿಗು ತೊಂದರೆ ಮಾಡಿಲ್ಲ. ಉಗ್ರರನ್ನು ಗುರಿಯಾಗಿಸಿಕೊಂಡು ಮಾತ್ರ ದಾಳಿ ನಡೆಸುತ್ತಿದೆ.
ಇದನ್ನೂ ಓದಿ » ಪಾಕ್ ಮೇಲೆ ದಾಳಿ, ಪಹಲ್ಗಾಮ್ನಲ್ಲಿ ಮೃತರಾದ ರಿಯಲ್ ಎಸ್ಟೇಟ್ ಉದ್ಯಮಿ ತಾಯಿಯ ಮೊದಲ ರಿಯಾಕ್ಷನ್, ಏನಂದ್ರು?

LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು





