ತಾಳಗುಪ್ಪ ಬದಲು ಕೋಟೆಗಂಗೂರಿಗೆ ರೈಲ್ವೆ ಟರ್ಮಿನಲ್ ಸ್ಥಳಾಂತರ, ಸಂಸದ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪವನ್ನು ತಿರಸ್ಕರಿಸಿದ ಸಂಸದ ಬಿ.ವೈ.ರಾಘವೇಂದ್ರ ಆ ಮುಖಂಡರುಗಳಿಗೆ ಬೇರೇನೂ ಕೆಲಸವಿಲ್ಲ ಎಂದು ಟೀಕಿಸಿದರು.

ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರೈಲ್ವೆ ಕೋಚಿಂಗ್ ಟರ್ಮಿನಲ್ ಸ್ಥಳ ಬದಲಾವಣೆ ಹಿಂದೆ ಯಾವ ಭೂ ಮಾಫಿಯಾ ಕೈವಾಡವೂ ಇಲ್ಲ. ಇದೇನಿದ್ದರೂ ಜಿಲ್ಲೆಯ ಕಾಂಗ್ರೆಸ್ಸಿಗರ ಕೈವಾಡವಷ್ಟೇ. ರೈಲ್ವೆ ಇಲಾಖೆಯೇ ಜಾಗವನ್ನು ಅಂತಿಮಗೊಳಿಸಿದೆ. ಅಧಿಕಾರಿಗಳು ವರದಿ ಕೊಟ್ಟಿದ್ದಾರೆ ಎಂದರು.

ಕೋಟೆಗಂಗೂರು ಜಿಲ್ಲೆಯನ್ನು ಬಿಟ್ಟು ಹೊರಗಿಲ್ಲ. ಸಾಗರವೂ ನನ್ನ ಕ್ಷೇತ್ರವೇ. ಶಿವಮೊಗ್ಗವೂ ನನ್ನ ಕ್ಷೇತ್ರವೇ ಅಲ್ಲದೇ ಶಿವಮೊಗ್ಗದಲ್ಲಿ ಆಗುತ್ತಿರುವ ರೈಲ್ವೆ ಕೋಚಿಂಗ್ ಕೂಡ ಕೇವಲ ಶಿವಮೊಗ್ಗಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ ಅದು ರಾಜ್ಯಕ್ಕೆ ಅರ್ಪಿತವಾಗುತ್ತದೆ ಎಂದರು.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಶಿವಮೊಗ್ಗ – ತಾಳಗುಪ್ಪ ನಡುವೆ ಇದ್ದ ಮೀಟರ್‍ಗೇಜನ್ನು ಬ್ರಾಡ್‍ಗೇಜ್‍ಗೆ ಪರಿವರ್ತನೆ ಮಾಡಲಾಗದೇ ಹಳಿಯನ್ನೇ ಕಿತ್ತು ಹಾಕಿದ್ದರು. ತಾವು ಸಂಸದರಾದ ಮೇಲೆ ಬ್ರಾಡ್‍ಗೇಜ್ ಮಾಡಿದ್ದೇನೆ. ಸಾಗರ – ತಾಳಗುಪ್ಪ – ಅರಸಾಳು ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜಗೆ ಏರಿಸಿದ್ದೇವೆ. ಇದು ಬಡಬಡಿಸುವ ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲ ಅಷ್ಟೆ ಎಂದರು.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment