ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪವನ್ನು ತಿರಸ್ಕರಿಸಿದ ಸಂಸದ ಬಿ.ವೈ.ರಾಘವೇಂದ್ರ ಆ ಮುಖಂಡರುಗಳಿಗೆ ಬೇರೇನೂ ಕೆಲಸವಿಲ್ಲ ಎಂದು ಟೀಕಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರೈಲ್ವೆ ಕೋಚಿಂಗ್ ಟರ್ಮಿನಲ್ ಸ್ಥಳ ಬದಲಾವಣೆ ಹಿಂದೆ ಯಾವ ಭೂ ಮಾಫಿಯಾ ಕೈವಾಡವೂ ಇಲ್ಲ. ಇದೇನಿದ್ದರೂ ಜಿಲ್ಲೆಯ ಕಾಂಗ್ರೆಸ್ಸಿಗರ ಕೈವಾಡವಷ್ಟೇ. ರೈಲ್ವೆ ಇಲಾಖೆಯೇ ಜಾಗವನ್ನು ಅಂತಿಮಗೊಳಿಸಿದೆ. ಅಧಿಕಾರಿಗಳು ವರದಿ ಕೊಟ್ಟಿದ್ದಾರೆ ಎಂದರು.
ಕೋಟೆಗಂಗೂರು ಜಿಲ್ಲೆಯನ್ನು ಬಿಟ್ಟು ಹೊರಗಿಲ್ಲ. ಸಾಗರವೂ ನನ್ನ ಕ್ಷೇತ್ರವೇ. ಶಿವಮೊಗ್ಗವೂ ನನ್ನ ಕ್ಷೇತ್ರವೇ ಅಲ್ಲದೇ ಶಿವಮೊಗ್ಗದಲ್ಲಿ ಆಗುತ್ತಿರುವ ರೈಲ್ವೆ ಕೋಚಿಂಗ್ ಕೂಡ ಕೇವಲ ಶಿವಮೊಗ್ಗಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ ಅದು ರಾಜ್ಯಕ್ಕೆ ಅರ್ಪಿತವಾಗುತ್ತದೆ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಶಿವಮೊಗ್ಗ – ತಾಳಗುಪ್ಪ ನಡುವೆ ಇದ್ದ ಮೀಟರ್‍ಗೇಜನ್ನು ಬ್ರಾಡ್‍ಗೇಜ್‍ಗೆ ಪರಿವರ್ತನೆ ಮಾಡಲಾಗದೇ ಹಳಿಯನ್ನೇ ಕಿತ್ತು ಹಾಕಿದ್ದರು. ತಾವು ಸಂಸದರಾದ ಮೇಲೆ ಬ್ರಾಡ್‍ಗೇಜ್ ಮಾಡಿದ್ದೇನೆ. ಸಾಗರ – ತಾಳಗುಪ್ಪ – ಅರಸಾಳು ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜಗೆ ಏರಿಸಿದ್ದೇವೆ. ಇದು ಬಡಬಡಿಸುವ ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲ ಅಷ್ಟೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]