ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ (Highway) ವಿಳಂಬದ ಕುರಿತು ಟೀಕೆಗೆ ಸಂಸದ ರಾಘವೇಂದ್ರ ತಿರುಗೇಟು ನೀಡಿದ್ದಾರೆ. ವಿಳಂಬಕ್ಕೆ ರಾಜ್ಯ ಸರ್ಕಾರವೆ ಕಾರಣ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಚತುಷ್ಪಥ ರಸ್ತೆ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮಹಾನ್ ನಾಯಕರು ನನ್ನನ್ನು ಟೀಕಿಸುತ್ತಿದ್ದಾರೆ. ಈ ಮಾರ್ಗದಲ್ಲಿ 37 ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಇದನ್ನು ನಡೆಸಬೇಕಿರುವುದು ರಾಜ್ಯ ಸರ್ಕಾರ ಎಂದು ತಿರುಗೇಟು ನೀಡಿದರು.
ನಾನು ದೆಹಲಿಯಲ್ಲಿ ಕೇಂದ್ರ ಭು ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ವಿಷಯ ತಿಳಿಸಿದ್ದೆ. ಅವರು ಸಿಎಂ ಸಿದ್ದರಾಮಯ್ಯ ಜತೆ ಮಾತನಾಡಿದ್ದಾರೆ. ಈಗ ಅಧಿಕಾರಿಗಳ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಾಜನೀಶ್ ನೇತೃತ್ವದ ಸಮಿತಿ ರಚನೆಯಾಗಿದೆ. ಸಮಿತಿ ಅಗತ್ಯ ಕ್ರಮ ಕೈಗೊಂಡು ಒಂದು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿಸಲಿದೆ ಎಂದು ರಾಘವೇಂದ್ರ ತಿಳಿಸಿದರು.
ಇದನ್ನೂ ಓದಿ – ಒಂದೇ ದಿನದಲ್ಲಿ ಭದ್ರಾ ಜಲಾಶಯದ ಒಳ ಹರಿವು ಭಾರಿ ಕುಸಿತ, ಇವತ್ತು ಎಷ್ಟಿದೆ?