SHIVAMOGGA LIVE NEWS | 1 MAY 2024 ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್.ಕಾಂ ವೆಬ್ಸೈಟ್ನಲ್ಲಿ. ಈ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ELECTION NEWS : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ಇವತ್ತು ಪೊಲೀಸರು ಭದ್ರತೆ ಪರಿಶೀಲಿಸಿದರು.
ರಾಹುಲ್ ಗಾಂಧಿ ಅವರಿಗೆ ಜೆಡ್ ಸೆಕ್ಯೂರಿಟಿ ಇದೆ. ಆದ್ದರಿಂದ ಕಾರ್ಯಕ್ರಮ ನಡೆಯುವ ವೇದಿಕೆ ಸುತ್ತಮುತ್ತ ರಾಹುಲ್ ಗಾಂಧಿ ಅವರ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದರು. ಇನ್ನು, ವಿಮಾನ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಅವರು ಸಾಗುವ ಮಾರ್ಗದಲ್ಲಿ ಡಮ್ಮಿ ಕಾನ್ವಾಯ್ ಮೂಲಕ ಪರಿಶೀಲಿಸಲಾಯಿತು.
ಜೊತೆಗೆ ಬರ್ತಾರೆ ಸಿಎಂ, ಡಿಸಿಎಂ
ರಾಹುಲ್ ಗಾಂಧಿ ಅವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಆಗಮಿಸಲಿದ್ದಾರೆ. ಕಲಬುರಗಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಸಮಾವೇಶದ ಬಳಿಕ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಮರಳಲಿದ್ದಾರೆ. ಈ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ – ಮಧು, ಕುಮಾರ್ ಮಧ್ಯೆ ‘ರೀಚಾರ್ಜ್’ ಕದನ, ನಾಯಿ ಪಾಡಾಗಲಿದೆ ಅಂತಾ ಬೇಳೂರು ಎಚ್ಚರ
