SHIVAMOGGA LIVE NEWS | 27 APRIL 2024
ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರಕ್ಕೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮೇ 2ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅಂದು ಮಧ್ಯಾಹ್ನ 12 ಗಂಟೆಗೆ ನಗರದ ಫ್ರೀಡಂ ಪಾರ್ಕ್‌ಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಾರ್ವಜನಿಕರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಶಿವಮೊಗ್ಗ ನಗರ, ಶಿಕಾರಿಪುರ, ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಗುರಿಯಾಗಿಸಿ ಕೊಂಡು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಎರಡು ದಿನ ಸಿನಿಮಾ ಟೀಮ್
ಗೀತಾ ಶಿವರಾಜಕುಮಾರ್ ಪರ ಪ್ರಚಾರಕ್ಕೆ ಏ.29 ಮತ್ತು 30ರಂದು ಸಿನಿಮಾ ತಂಡದವರು ಆಗಮಿಸಲಿದ್ದಾರೆ. ಎರಡು ದಿನ ಕಾಲ ರೋಡ್ ಶೋಗಳು, ಕಾರ್ಯಕ್ರಮಗಳು ನಡೆಯಲಿವೆ. ನಟರಾದ ದುನಿಯಾ ವಿಜ, ಡಾಲಿ ಧನಂಜಯ್, ಧೃವ ಸರ್ಜಾ, ವಿಜಯ್ ರಾಘವೇಂದ್ರ, ಚಿಕ್ಕಣ್ಣ, ಪ್ರೇಮ್, ಅನುಶ್ರೀ, ನಿಶ್ಚಿಕಾ ನಾಯ್ಡು, ನಿಧಿ ಸುಬ್ಬಯ್ಯ, ಚಂದನ್ ಶೆಟ್ಟಿ, ಅಕುಲ್ ಮತ್ತಿತರರು ಆಗಮಿಸಲಿದ್ದಾರೆ. ಬೈಂದೂರು ಆದಿಯಾಗಿ ಎಲ್ಲ ಕಡೆ ರೋಡ್ ಶೋ ನಡೆಯಲಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿ ಯಲ್ಲಿ 4.50 ಲಕ್ಷ ಜನರಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಮತ ಯಾಚನೆ ಮಾಡಲಾಗಿದೆ. ನಗರದಲ್ಲಿ ಇನ್ಮುಂದೆ ಪ್ರಚಾರ ಕೈಗೊಳ್ಳಲಾಗುವುದು. ಗೀತಾ ಅವರು ಭಾರಿ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಮುಖರಾದ ಚಂದ್ರಭೂಪಾಲ್, ಎಸ್.ಪಿ.ಶೇಷಾದ್ರಿ, ಜಿ.ಡಿ.ಮಂಜುನಾಥ್, ಚಿನ್ನಪ್ಪ, ಚಂದ್ರಶೇಖರ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಶಿವಮೊಗ್ಗ ಲೋಕಸಭೆ ಚುನಾವಣೆ, ಅಭ್ಯರ್ಥಿಗಳಿಗೆ ಸ್ವಂತ ವರದಿಗಾರರ ತಂಡ, ಕ್ಯಾಮರಾ ಟೀಮ್, ಏನಿವರ ಕೆಲಸ?
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು