ರಾತ್ರೋರಾತ್ರಿ ಶಿವಮೊಗ್ಗ ಪೊಲೀಸರಿಂದ ಮನೆಗಳ ಮೇಲೆ ದಾಳಿ, ಸಂಘಟನೆಯ ಕಚೇರಿಗೆ ಬೀಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ನಿಷೇಧದ ಬೆನ್ನಿಗೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ಖಾಕಿ ಪಡೆ ದಾಳಿ ನಡೆಸಿದೆ. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆ ಕಚೇರಿ ಮೇಲೆ ದಾಳಿ ನಡೆಸಿ, ಬೀಗ (LOCK) ಹಾಕಲಾಗಿದೆ.

Shimoga Nanjappa Hospital

ಕಳೆದ ರಾತ್ರಿ ಶಿವಮೊಗ್ಗ ಪೊಲೀಸರು ಐದು ತಂಡಗಳಲ್ಲಿ ಪ್ರತ್ಯೇಕ ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಪರಾರಿಯಾಗಿರುವ ಪಿಎಫ್ಐ ಮುಖಂಡರು

ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಉಬೇದುಲ್ಲಾ ಷರೀಫ್, ಮಾಜಿ ಅಧ್ಯಕ್ಷ ರಿಜ್ವಾನ್, ಸದಸ್ಯ ಫಾರೂಖ್, ಎಸ್.ಡಿ.ಪಿ.ಐ ಸಂಘಟನೆ ಮಾಜಿ ಜಿಲ್ಲಾಧ್ಯಕ್ಷ ಮತ್ತು ರಾಜ್ಯ ಸಮಿತಿ ಸದಸ್ಯ ಸಲೀಂ ಖಾನ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರ ದಾಳಿ, ಐವರ ಬಂಧನ, ಕಾರಣ ಬಿಚ್ಚಿಟ್ಟ ಗೃಹ ಸಚಿವರು

ನಿಷೇಧದ ಬೆನ್ನಿಗೆ ಪಿಎಫ್ಐ ಸಂಘಟನೆಯ ಬಹುತೇಕ ಮುಖಂಡರು ತಮ್ಮ ಮನೆಗಳಿಂದ ಪರಾರಿಯಾಗಿದ್ದಾರೆ. ಹಾಗಾಗಿ ಮುಖಂಡರ ಮನೆ ಬಾಗಿಲಿಗೆ ಬೀಗ ಹಾಕಲಾಗಿದೆ. ಆದ್ದರಿಂದ ಜಿಲ್ಲಾಧಿಕಾರಿ ಅವರ ಅನುಮತಿ ಪಡೆದು, ಮನೆಗಳ ಬೀಗ (LOCK) ಒಡೆದು ಪೊಲೀಸರು ಪರಿಶೀಲನೆ ನಡೆಸಿದರು.

ಎಸ್.ಡಿ.ಪಿ.ಐ ಕಚೇರಿಗೆ ಬೀಗ (LOCK)

ಮತ್ತೊಂದೆಡೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಎಸ್.ಡಿ.ಪಿ.ಐ ಸಂಘಟನೆಯ ಕಚೇರಿಯ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಕಚೇರಿಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸರು, ಬಳಿಕ ಕಚೇರಿಗೆ ಬೀಗ ಜಡಿದಿದ್ದಾರೆ. ಕಚೇರಿಯನ್ನು ಸೀಜ್ ಮಾಡಲಾಗಿದ್ದು, ಬೀಗ (LOCK) ಹಾಕಿ ಸೀಲ್ ಮಾಡಲಾಗಿದೆ. ತಹಶೀಲ್ದಾರ್ ನಾಗರಾಜ್ ಅವರು ನೇತೃತ್ವದಲ್ಲಿ ಎಸ್.ಡಿ.ಪಿ.ಐ ಕಚೇರಿಯನ್ನು ಸೀಜ್ ಮಾಡಲಾಗಿದೆ.

ಐದು ಪ್ರತ್ಯೇಕ ಟೀಮ್

ಕಳೆದ ರಾತ್ರಿ ಶಿವಮೊಗ್ಗ ಪೊಲೀಸರು ಐದು ಪ್ರತ್ಯೇಕ ತಂಡಗಳನ್ನು ರಚಿಸಿಕೊಂಡು ದಾಳಿ ನಡೆಸಿದ್ದಾರೆ. ದೊಡ್ಡಪೇಟೆ ಠಾಣೆ ಇನ್ಸ್ ಪೆಕ್ಟರ್ ಅಂಜನ್ ಕುಮಾರ್, ಕೋಟೆ ಠಾಣೆ ಸಿಪಿಐ ಚಂದ್ರಶೇಖರ್, ವಿನೋಬನಗರ ಠಾಣೆ ಸಿಪಿಐ ರವಿ, ಶಿವಮೊಗ್ಗ ಗ್ರಾಮಾಂತರ ಠಾಣೆ ಸಿಪಿಐ ಅಭಯ್ ಪ್ರಕಾಶ್ ಸೋಮನಾಳ್, ಕುಂಸಿ ಠಾಣೆ ಸಿಪಿಐ ಹರೀಶ್ ಪಟೇಲ್ ನೇತೃತ್ವದಲ್ಲಿ ಪೊಲೀಸರ ತಂಡಗಳು ದಾಳಿ ನಡೆಸಿವೆ. ಪೊಲೀಸರ ದಾಳಿ ವೇಳೆ ವಿವಿಧ ಇಲಾಖೆ ಅಧಿಕಾರಿಗಳು ಕೂಡ ಭಾಗವಹಿಸಿದ್ದರು.

ದೇಶದ್ರೋಹ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಿಎಫ್ಐ ಮತ್ತು ಅದರ ಅಂಗ ಸಂಸ್ಥಳನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಪಿಎಫ್ಐ ಸಂಘಟನೆ ಮುಖಂಡರ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಪಿಎಫ್ಐ ಸಂಘಟನೆ ನಿಷೇಧ, ಶಿವಮೊಗ್ಗದಲ್ಲಿ ಈಶ್ವರಪ್ಪ ಪ್ರತಿಕ್ರಿಯೆ, ಹೇಳಿದ್ದೇನು?

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment