ವೇಶ್ಯಾವಾಟಿಕೆ ಆರೋಪ, ಶಿವಮೊಗ್ಗದ ವಿನೋಬನಗರದಲ್ಲಿ ಐಪಿಎಸ್‌ ಅಧಿಕಾರಿ ನೇತೃತ್ವದಲ್ಲಿ ದಾಳಿ

SHIVAMOGGA LIVE | 25 JUNE 2023

SHIMOGA : ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆ ವಿನೋಬನಗರ ಸ್ಪಾ (Spa) ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸಂತ್ರಸ್ತ ಯುವತಿಯರ ರಕ್ಷಣೆ ಮಾಡಲಾಗಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Police-Van-Jeep-at-Shimoga-Nehru-Road

ವಿನೋಬನಗರದಲ್ಲಿರುವ ದಿ ಅರ್ಬನ್‌ ಸ್ಪಾ (Spa) ಮೇಲೆ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಬಿಂದು ಮಣಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಲ್ಲಿದ್ದ ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ

ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ದಾಖಲೆಗಳು ಲಭ್ಯವಾಗಿದೆ. ಮಾಲೀಕರ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ವೇಶ್ಯಾವಾಟಿಕೆ ಆರೋಪ, ಮನೆ ಮೇಲೆ ಪೊಲೀಸರ ದಾಳಿ, ಮೂವರು ಮಹಿಳೆಯರ ರಕ್ಷಣೆ, ಇಬ್ಬರು ಅರೆಸ್ಟ್‌

ಏಳು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.

Leave a Comment