ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 FEBRUARY 2021
ಸಂಯುಕ್ತ ಕಿಸಾನ್ ಮೋರ್ಚಾದ ಕರೆಯ ಹಿನ್ನೆಲೆ ದೇಶಾದ್ಯಂತ ರೈಲ್ ರೋಖೋ ಚಳವಳಿ ನಡೆಯುತ್ತಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿಯೂ ಚಳವಳಿ ನಡೆಸಲಾಯಿತು. ಆದರೆ ಪ್ರತಿಭಟನಾನಿರತ ರೈತರನ್ನು ರೈಲು ನಿಲ್ದಾಣದ ಒಳಗೆ ಬಿಡದೆ ತಡೆ ಹಿಡಿಯಲಾಯಿತು.
ರೈತ ಸಂಘದ ನೇತೃತ್ವದಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಮೊಂಡಾಟ ಮುಂದುವರೆಸದಂತೆ ಎಚ್ಚರಿಸಲಾಯಿತು.
ನಿಲ್ದಾಣಕ್ಕೆ ಪೊಲೀಸ್ ಸರ್ಪಗಾವಲು
ರೈಲ್ ರೋಖೋ ಚಳವಳಿಯ ಹಿನ್ನೆಲೆ ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮುಖ್ಯ ದ್ವಾರದಲ್ಲಿ ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿತ್ತು. ಪ್ರಯಾಣಿಕರನ್ನು ಮಾತ್ರ ಒಳಬಿಡಲಾಗುತ್ತಿತ್ತು. ಪ್ರತಿಭಟನೆ ನಡೆಸಲು ಬಂದ ರೈತರನ್ನು ಪೊಲೀಸರು ಮುಖ್ಯ ದ್ವಾರದಲ್ಲೇ ತಡೆದರು.
ರೈತರು, ಪೊಲೀಸರ ನಡುವೆ ಮಾತಿನ ಚಕಮಕಿ
ನಿಲ್ದಾಣದ ಮುಖ್ಯ ದ್ವಾರದಲ್ಲಿ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ರೈಲ್ ರೋಖೋಗೆ ಅವಕಾಶ ನೀಡಬೇಕು ಎಂದು ರೈತರು ಪಟ್ಟು ಹಿಡಿದರೆ, ನಿಲ್ದಾಣದ ಒಳಗೆ ಬಿಡಲು ಪೊಲೀಸರು ಒಪ್ಪಲಿಲ್ಲ. ಈ ವೇಳೆ ತಮ್ಮನ್ನು ಬಂಧಿಸಿ, ಕೇಸ್ ಹಾಕುವಂತೆ ರೈತರು ಆಗ್ರಹಿಸಿದರು.
ಆವರಣದಲ್ಲಿ ಪ್ರತಿಭಟನೆಗೆ ಅವಕಾಶ
ರೈಲ್ ರೋಖೋಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ ಪೊಲೀಸರು, ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ರತಿಭಟನಾ ಸಭೆಗೆ ಅವಕಾಶ ನೀಡಿದರು. ಈ ವೇಳೆ ಮಾತನಾಡಿದ ರೈತ ಮುಖಂಡ ಕೆ.ಟಿ.ಗಂಗಾಧರ್, ಕೇಂದ್ರ ಸರ್ಕಾರ ಮೂರು ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ರೈತರು ಸಂಕಷ್ಟಕ್ಕೀಡಾಗಬೇಕಾಗುತ್ತದೆ ಎಂದರು. ರೈತ ಸಂಘದ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಮಾತನಾಡಿ, ಈ ಕಾಯ್ದೆಗಳು ರೈತರ ಪಾಲಿಗೆ ಮರಣಶಾಸನವಾಗಲಿದೆ ಎಂದರು.
VIDEO REPORT
ಪ್ರಗತಿಪರ ಸಂಘಟನೆಗಳ ಮುಖಂಡ ಕೆ.ಎಲ್.ಅಶೋಕ್, ದಲಿತ ಸಂಘರ್ಷ ಸಮಿತಿ ಮುಖಂಡ ಹಾಲೇಶಪ್ಪ, ರೈತ ಸಂಘದ ವೀರೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422