ಶಿವಮೊಗ್ಗಕ್ಕೆ ಬರ್ತಿದ್ದಾರೆ ರೈಲ್ವೆ ಮಿನಿಸ್ಟರ್‌, ನಡೆಯಲಿದೆ ಮಹತ್ವದ ಸಭೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 22 SEPTEMBER 2024 : ಜಿಲ್ಲೆಯ ರೈಲ್ವೆ ಯೋಜನೆಗಳ ಪರಿಶೀಲನೆ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ (Minister) ವಿ.ಸೋಮಣ್ಣ ಶಿವಮೊಗ್ಗ ಭೇಟಿ ನಿಗದಿಯಾಗಿದೆ. ಸೆ.26ರಂದು ಸಚಿವ ಸೋಮಣ್ಣ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸೆ.26ರಂದು ಹುಬ್ಬಳ್ಳಿಯಿಂದ ಬೆಳಗ್ಗೆ 9.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ. ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಕೋಚಿಂಗ್‌ ಡಿಪೋ ಕಾಮಗಾರಿ ಪರಿಶೀಲನೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈಲ್ವೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಿಂದ ಬೀರೂರಿಗೆ ತೆರಳಲಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment