ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ತಪ್ಪಿದ ಭಾರಿ ಅನಾಹುತ, ಚಲಿಸುತ್ತಿದ್ದ ರೈಲಿನಿಂದ ಇಳಿದ ಮಹಿಳೆಯ ರಕ್ಷಣೆ | VIDEO NEWS

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ನವೆಂಬರ್ 2021

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಭಾರಿ ಅನಾಹುತ ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಆಯಾತಪ್ಪಿ ಬಿದ್ದ ಮಹಿಳೆಯನ್ನು ರೈಲ್ವೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಾಣದ ಹಂಗು ತೊರೆದು ಪೊಲೀಸರು ಮಹಿಳೆಯ ರಕ್ಷಣೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ರೈಲು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಟಾಗ ಘಟನೆ ಸಂಭವಿಸಿದೆ. ಬೆಳಗ್ಗೆ 6.55ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ಬರುವ ರೈಲು 7.05ಕ್ಕೆ ನಿಲ್ದಾಣದಿಂದ ಹೊರಡಲಿದೆ. ಮಂಗಳವಾರ ಬೆಳಗ್ಗೆ ರೈಲು ಹೊರಟಾಗ ಘಟನೆ ಸಂಭವಿಸಿದೆ.

ಹೇಗಾಯ್ತು ಘಟನೆ?

ಸಂಬಂಧಿಕರನ್ನು ರೈಲು ಹತ್ತಿಸಲು ಬಂದಿದ್ದ ಮಹಿಳೆ ರೈಲು ಏರಿದ್ದರು. ರೈಲು ಹೊರಡುತ್ತಿದ್ದಂತೆ ಗಾಬರಿಯಿಂದ ಕೆಳಗಿಳಿಯಲು ಮುಂದಾಗಿದ್ದಾರೆ. ವ್ಯಕ್ತಿಯೊಬ್ಬರು ಮಹಿಳೆಯ ಕೈ ಹಿಡಿದು ಕೆಳಗಿಳಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೈಲು ಚಲಿಸುತ್ತಿದ್ದ ವಿರುದ್ಧ ದಿಕ್ಕಿಗೆ ಮುಖ ಮಾಡಿಕೊಂಡು ಮಹಿಳೆ ಪ್ಲಾಟ್’ಫಾರಂಗೆ ಕಾಲಿಟಿದ್ದಾರೆ. ವಿರುದ್ಧ ದಿಕ್ಕಿಗೆ ಮುಖ ಮಾಡಿದ್ದು ಮತ್ತು ಸೀರೆ ಧರಿಸಿದ್ದರಿಂದ ಮಹಿಳೆ ಪ್ಲಾಟ್’ಫಾರಂ ಮೇಲೆ ಬಿದ್ದಿದ್ದಾರೆ.

ಪ್ರಾಣದ ಹಂಗು ತೊರೆದ ರೈಲ್ವೆ ಪೊಲೀಸ್

ಪ್ಲಾಟ್’ಫಾರಂ ಮೇಲೆ ನಿಂತಿದ್ದ ರೈಲ್ವೆ ಪೊಲೀಸರು ಪ್ರಾಣದ ಹಂಗು ತೊರೆದು ಮಹಿಳೆಯ ರಕ್ಷಣೆ ಮಾಡಿದ್ದಾರೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF)ನ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸರಾದ ಅಣ್ಣಪ್ಪ ಎ.ಎಸ್ ಮತ್ತು ಬಿ.ಎಸ್.ಸಂತೋಷ್ ಅವರು ಕೂಡಲೆ ಮಹಿಳೆಯ ನೆರವಿಗೆ ಬಂದಿದ್ದಾರೆ. ಮಹಿಳೆ ರೈಲಿಗೆ ಸಿಲುಕದಂತೆ ನೋಡಕೊಂಡಿದ್ದಾರೆ.

(ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ ಸಂಭವಿಸಬಹುದಾದ ಅಪಾಯ ತಪ್ಪಲಿದೆ. ಇಲ್ಲಿದೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)

ADVT JULY NANJAPPA HOSPITAL HOME LAB TESTING

ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ರೈಲ್ವೆ ಪೊಲೀಸರ ಕಾರ್ಯಕ್ಕೆ ಸ್ಥಳದಲ್ಲಿದ್ದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು, ರೈಲ್ವೆ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಈ ದೃಶ್ಯ ಗಮನಿಸಿ ರೈಲ್ವೆ ಪೊಲೀಸರ ಕಾರ್ಯಕ್ಕೆ ಶಹಬ್ಬಾಸ್ ತಿಳಿಸಿದ್ದಾರೆ. ರೈಲ್ವೆ ಇಲಾಖೆ ಮೈಸೂರು ವಿಭಾಗದ ಡಿವಿಷನಲ್ ಮ್ಯಾನೇಜರ್ ರಾಹುಲ್ ಅಗರ್’ವಾಲ್ ಅವರು ಪೊಲೀಸರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VIDEO ನೋಡಲು ಕೆಳಗೆ ಕ್ಲಿಕ್ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 10, 2021

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment