ಗುಡುಗು, ಮಿಂಚು, ಭಾರಿ ಮಳೆಗೆ ಶಿವಮೊಗ್ಗ ನಗರ ತತ್ತರ, ತಗ್ಗು ಪ್ರದೇಶದ ಜನರಲ್ಲಿ ಆತಂಕ ಹೆಚ್ಚಳ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021 ➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದಲ್ಲಿ  ಸುರಿದ ಭಾರಿ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ.

ನಗರದಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಗುಡುಗು, ಮಿಂಚು ಸಹಿತ ಜೋರು ಮಳೆ ಸುರಿಯುತ್ತಿದೆ.

ಭಾರಿ ಮಳೆಯಿಂದಾಗಿ ಶಿವಮೊಗ್ಗ ನಗರದ ಚರಂಡಿಗಳು ತುಂಬಿ ಹರಿಯುತ್ತಿವೆ. ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಗುಂಡಿ ತೋಡಲಾಗಿದೆ. ಗುಂಡಿಗಳಲ್ಲಿ ನೀರು ತುಂಬಿದೆ. ರಸ್ತೆಯ ಮೇಲೆಲ್ಲ ನೀರು ಹರಿಯುತ್ತಿದೆ.

ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಆರ್‍ಎಂಎಲ್‍ ನಗರ, ಗೋಪಾಲಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ಮಳೆ ನೀರು ನುಗ್ಗಿರುವ ವರದಿಯಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು