ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಜೋರು ಮಳೆ, ತಗ್ಗಿದ ತಾಪಮಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 30 MAY 2023

SHIMOGA : ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಹೊಸನಗರ, ಸಾಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಸುರಿಯುತ್ತಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಮೋಡ ಕವಿದ ವಾತಾವರಣವಿದೆ.

rain in shimoga

ಸಾಗರ, ಆನಂದಪುರ, ಹೊಸನಗರ, ರಿಪ್ಪನ್‌ಪೇಟೆ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಮಳೆಯಾಗುತ್ತಿದೆ. ಸಿಡಿಲು, ಗುಡುಗು ಜೋರಾಗಿರುವುದರಿಂದ ಜನರು ಮನೆಯಿಂದ ಹೊರ ಬರಲು ಹೆದರುವಂತಾಗಿದೆ.

ಇದನ್ನೂ ಓದಿ – ಗಾಳಿ, ಮಳೆ ಹಿನ್ನೆಲೆ, ಸಿಟಿ ರೌಂಡ್ಸ್‌ ಆರಂಭಿಸಿದ ಶಿವಮೊಗ್ಗ ಎಂಎಲ್‌ಎ

ಶಿವಮೊಗ್ಗ ತಾಲೂಕಿನ ವಿವಿಧೆಡೆಯು ಮಳೆ ಸುರಿಯುತ್ತಿದೆ. ಆಯನೂರು, ಕುಂಸಿ, ಹಾರನಹಳ್ಳಿ ಭಾಗದಲ್ಲಿ ಮಳೆಯಾಗುತ್ತಿದೆ. ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ಮೋಡ ಕವಿದ ವಾತಾವರಣವಿದೆ.

Shimoga Rain General Image

ಸೋಮವಾರ ಶಿವಮೊಗ್ಗ ನಗರದ ವಿವಿಧೆಡೆ ಜೋರು ಗಾಳಿ ಸಹಿತ ಮಳೆಯಾಗಿದೆ. ಇದರಿಂದ ವಿವಿಧೆಡೆ ಮರಗಳು ಬುಡಮೇಲಾಗಿ ವಾಹನಗಳು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಹಲವು ಮನೆಗಳ ಮೇಲ್ಛಾವಣಿ ಹಾರಿ ಹೋಗಿವೆ. ಬೊಮ್ಮನಕಟ್ಟೆ ಆ‍ಶ್ರಯ ಬಡಾವಣೆಯಲ್ಲಿ ಸಿಡಿಲಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

061021 Heavy Rain At Shimoga

ಜಿಲ್ಲೆಯಲ್ಲಿ ತಗ್ಗಿದ ತಾಪಮಾನ

ಕಳೆದ ಕೆಲವು ದಿನದಿಂದ ಬಿಸಿಲಿನ ಅಬ್ಬರ ಜೋರಾಗಿತ್ತು. ತಪಮಾನ ಏರಿಕೆಯಾಗಿತ್ತು. ಮಳೆಯ ಅಬ್ಬರಕ್ಕೆ ತಾಪಮಾನದಲ್ಲಿ ಇಳಿಕೆಯಾಗಿದೆ. ಶಿವಮೊಗ್ಗದಲ್ಲಿ ಸದ್ಯ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment