ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 9 OCTOBER 2024 : ಶಿವಮೊಗ್ಗ ದಸರಾದ ಮ್ಯೂಸಿಕಲ್ ನೈಟ್ (Musical Night) ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾಗಿದೆ. ಇನ್ನೊಂದೆಡೆ ಮಳೆ ಬರಲಿದೆ ಎಂಬ ಅರಿವಿದ್ದರೂ ಪೆಂಡಾಲ್ ವ್ಯವಸ್ಥೆ ಮಾಡದಿರುವುದನ್ನು ಖಂಡಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಫ್ರೀಡಂ ಪಾರ್ಕ್ನಲ್ಲಿ ಯುವ ದಸರಾದ ಅಂಗವಾಗಿ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ಆಯೋಜಿಸಲಾಗಿದೆ. ಖ್ಯಾತ ಗಾಯಕರಾದ ರಾಜೇಶ್ ಕೃಷ್ಣನ್ ಮತ್ತು ಡಾ. ಶಮಿತಾ ಮಲ್ನಾಡ್ ಅವರ ತಂಡ ಗಾಯನ ಕಾರ್ಯಕ್ರಮವಿತ್ತು. ಆದರೆ ಮಳೆಯಿಂದಾಗಿ ಕಾರ್ಯಕ್ರಮಕ್ಕೆ ಅಡ್ಡಿಯಾಗಿದೆ.
ಗುಡುಗು, ಮಿಂಚು, ಮಳೆ ಅಬ್ಬರ
ಸಂಜೆ 5 ಗಂಟೆಯಿಂದ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ಆರಂಭವಾಗಬೇಕಿತ್ತು. ಆದರೆ ಗುಡುಗು ಸಹಿತ ಜೋರು ಮಳೆಯಾಗಿದ್ದರಿಂದ ಕಾರ್ಯಕ್ರಮ ಇನ್ನೂ ಶುರುವಾಗಿಲ್ಲ. ಇನ್ನೊಂದೆಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಕೂರಲು ವ್ಯವಸ್ಥೆ ಇಲ್ಲ. ಜನರು ಛತ್ರಿಗಳು, ಚೇರುಗಳನ್ನು ಹಿಡಿದು ಮಳೆಯಿಂದ ರಕ್ಷಣೆ ಪಡೆದರು.
ಪಾಲಿಕೆ ವಿರುದ್ಧ ಜನರ ಆಕ್ರೋಶ
ಇನ್ನೊಂದೆಡೆ ಮಳೆಯಿಂದ ರಕ್ಷಣೆಗೆ ಜನರಿಗೆ ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆ ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಮ್ಯೂಸಿಕಲ್ ನೈಟ್ ಕಾರ್ಯಕ್ರಮ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು. ಇದರಿಂದ ಕೆಲಕಾಲ ಗೊಂದಲ ಉಂಟಾಯಿತು.
ಇದನ್ನೂ ಓದಿ » ಬಾವಿಗೆ ಬಿದ್ದು ತಳದಲ್ಲಿ ಗಿಡಗಳನ್ನು ಹಿಡಿದು ಕುಳಿತಿದ್ದ ಮಹಿಳೆ