ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | RAIN EFFECT | 19 ಮೇ 2022
ಭಾರಿ ಮಳೆಗೆ ಶಿವಮೊಗ್ಗದ ಗಾಂಧಿ ನಗರದ ಬಹುಭಾಗ ಜಲಾವೃತವಾಗಿದೆ. ಕೆಲವು ರಸ್ತೆಗಳಲ್ಲಿ ಜನರು ಮನೆಯಿಂದ ಹೊರಗೆ ಬರಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಗಾಂಧಿ ನಗರ ಮುಖ್ಯ ರಸ್ತೆ, ಎ ಬ್ಲಾಕ್, ಬಿ ಬ್ಲಾಕ್’ನ ವಿವಿಧ ಅಡ್ಡರಸ್ತೆಗಳು ಜಲಾವೃತವಾಗಿವೆ. ಕೆಲವು ಕಡೆಯಂತು ಮೊಣಕಾಲು ಉದ್ದ ನೀರು ನಿಂತಿದೆ. ಹಾಗಾಗಿ ಜನರು ಮನೆಯಿಂದ ಹೊರಗೆ ಬರಲು ಹೆದರುವಂತಾಗಿದೆ.
ನೀರು ನಿಲ್ಲಲು ಕಾರಣವೇನು?
ಗಾಂಧಿ ನಗರದಲ್ಲಿ ಮಳೆ ನೀರು ಚರಂಡಿಗೆ ಹೋಗುತ್ತಿಲ್ಲ. ಹಾಗಾಗಿ ರಸ್ತೆ ಮೇಲೆ ನೀರು ನಿಂತಿದೆ. ಕೆಳ ಅಂತಿಸ್ತಿನ ಮನೆಗಳು, ಅಂಗಡಿಗಳು, ಕಚೇರಿಗಳಿಗೆ ನೀರು ನುಗ್ಗಿದೆ. ಇದರಿಂದ ದೊಡ್ಡ ಪ್ರಮಾಣದ ಹಾನಿ ಸಂಭವಿಸಿದೆ. ಗಾಂಧಿ ನಗರ ಪಾರ್ಕ್ ಸಂಪೂರ್ಣ ಜಲಾವೃತವಾಗಿದೆ.
ಇನ್ನು, ಮನೆಗಳಿಗೆ ನೀರು ನುಗ್ಗಿದ್ದರಿಂದ ಕೆಲವರು ತಮ್ಮ ಸಂಬಂಧಿಕರು, ಸ್ನೇಹಿತರ ಮನೆಗೆ ತೆರಳುತ್ತಿದ್ದರು. ಮಕ್ಕಳು, ಹಿರಿಯರನ್ನು ಕರೆದೊಯ್ಯುವ ದೃಶ್ಯ ಸಾಮಾನ್ಯವಾಗಿತ್ತು.
ಸ್ಮಾರ್ಟ್ ಸಿಟಿ ವಿರುದ್ಧ ಹಿಡಿಶಾಪ
ಗಾಂಧಿ ನಗರ ಜಲಾವೃತವಾಗಲು ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚರಂಡಿಗೆ ನೀರು ಹೋಗಲು ಸರಿಯಾದ ವ್ಯವಸ್ಥೆ ಮಾಡದಿರುವುದೆ ಸಮಸ್ಯೆಗೆ ಕಾರಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಮಳೆ ಅವಾಂತರ, ಎಲ್ಲೆಲ್ಲಿ ಏನೇನಾಗಿದೆ? ಭಾಗ – 1
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















