ಶಿವಮೊಗ್ಗ ಲೈವ್.ಕಾಂ | SHIMOGA RAIN | 28 ಏಪ್ರಿಲ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಹಲವು ಕಡೆ ಆಲಿಕಲ್ಲು ಮಳೆಯಾದ ವರದಿಯಾಗಿದೆ.
ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಜೋರು ಗಾಳಿ, ಗುಡುಗು ಸಹಿತ ಮಳೆಯಾಗಿದೆ. ಭಾರಿ ಮಳೆಯಿಂದ ಅಲ್ಲಲ್ಲಿ ಚರಂಡಿ ತುಂಬಿ ನೀರು ರಸ್ತೆಗೆ ಹರಿದಿದೆ. ಇನ್ನು, ಜೋರು ಮಳೆಯಿಂದ ಶಿವಮೊಗ್ಗ ನಗರದಲ್ಲಿ ಜನಜೀವನ ಅಸ್ತವ್ಯಸ್ತ ಆಗಿತ್ತು.
ಶಿವಮೊಗ್ಗ ತಾಲೂಕಿನಲ್ಲೂ ಮಳೆ ಅಬ್ಬರಿಸಿದೆ. ವಿವಿಧೆಡೆ ಮಳೆಗೆ ಮರಗಳು ಬುಡಮೇಲಾದ ವರದಿಯಾಗಿದೆ. ಮಳೆಯಾಗುತ್ತಿದ್ಧಂತೆ ವಿದ್ಯುತ್ ವ್ಯತ್ಯಯ ಉಂಟಾಯಿತು.
ಭದ್ರಾವತಿಯಲ್ಲಿ ಆಲಿಕಲ್ಲು ಮಳೆ
ಇತ್ತ ಭದ್ರಾವತಿಯಲ್ಲಿ ಆಲಿಕಲ್ಲು ಮಳೆಯಾಗಿದೆ. ನಗರದ ವಿವಿಧೆಡೆ ಜೋರು ಮಳೆಯೊಂದಿಗೆ ಆಲಿಕಲ್ಲು ಬಿದ್ದಿದೆ. ತಾಲೂಕಿನ ವಿವಿಧೆಡೆಯು ಜೋರು ಮಳೆಯಾಗಿದೆ.
ಸಾಗರ, ಹೊಸನಗರದ ಕೆಲವು ಕಡೆ ಮಳೆಯಾಗಿದೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






