ಶಿವಮೊಗ್ಗ ಲೈವ್
RAINFALL NEWS, 20 OCTOBER 2024 : ಶಿವಮೊಗ್ಗ ನಗರದಲ್ಲಿ ಮತ್ತೆ ಮಳೆ ಆರಂಭವಾಗಿದೆ. ಗುಡುಗು ಸಹಿತ ಜೋರಾಗಿ ಮಳೆ ಸುರಿಯುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಸಂಜೆ ಕೆಲವು ಹೊತ್ತು ಅಬ್ಬರಿಸಿ ಮರೆಯಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಜೋರಾಗಿದೆ. ಕಳೆದ ರಾತ್ರಿ ಮತ್ತು ಭಾನುವಾರ ಬೆಳಗ್ಗೆ ಸುರಿದ ಮಳೆಗೆ ನಗರದ ವಿವಿಧೆಡೆ ಬಡಾವಣೆಗಳು, ಮನೆಗಳು ಜಲಾವೃತವಾಗಿದ್ದವು. ದೊಡ್ಡ ಪ್ರಮಾಣದ ಹಾನಿ ಸಂಭವಿಸಿದೆ. ಈಗ ಮತ್ತೆ ವರುಣ ಅಬ್ಬರಿಸುತ್ತಿದ್ದು ರಾಜಾ ಕಾಲುವೆ, ಚಾನಲ್ ಅಕ್ಕಪಕ್ಕದ ಬಡಾವಣೆ ನಿವಾಸಿಗಳಲ್ಲಿ ಭೀತಿ ಉಂಟಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ
