ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020
ಬಂಡವಾಳಶಾಹಿಗಳು, ಭೂಗಳ್ಳರಿಗೆ ಗ್ರಾಮದೊಳಗೆ ಪ್ರವೇಶವಿಲ್ಲ. ಇನ್ಮುಂದೆ ಎಲ್ಲಾ ಗ್ರಾಮಗಳ ಮುಂದೆ ಇಂತದ್ದೊಂದು ಸೂಚನಾ ಫಲಕ ಅಳವಡಿಸಲು ರಾಜ್ಯ ರೈತ ಸಂಘ ಮ್ತು ಹಸಿರು ಸೇನೆ ನಿರ್ಧರಿಸಿದೆ.
ಶಿವಮೊಗ್ಗದ ಪತ್ರಿಕಾ ಭವನದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳು ವಿಚಾರಗೊಷ್ಠಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ, ರೈತ ಮಹಿಳೆಯರಿಂದ ಸೂಚನಾ ಫಲಕವನ್ನು ಉದ್ಘಾಟಿಸಲಾಯಿತು.
ಭೂ ಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವುದು ರೈತ ವಿರೋಧ ನೀತಿಯಾಗಿದೆ. ರೈತರಲ್ಲದವರು ಕೃಷಿ ಭೂಮಿ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಉಳ್ಳವರು ಭೂಮಿಯನ್ನು ಕೊಂಡು, ಅದನ್ನು ಮಾರುಕಟ್ಟೆಯ ಸರಕನ್ನಾಗಿ ಮಾಡಿಕೊಳ್ಳುತ್ತಾರೆ. ಭಾರತದ ಕೃಷಿ ಪದ್ಧತಿಯೇ ಸಂಪೂರ್ಣವಾಗಿ ನಾಶವಾಗಲಿದೆ ಎಂದು ರೈತ ಮುಖಂಡ ಕೆ.ಟಿ.ಗಂಗಾಧರ್ ಆತಂಕ ವ್ಯಕ್ತಪಡಿಸಿದರು.
ಪ್ರಗತಿಪರ ಚಿಂತಕ ಪ್ರೊ.ರಾಜೇಂದ್ರ ಚೆನ್ನಿ, ಪ್ರೊ. ರಾಜಪ್ಪ ಮಾಸ್ತರ್, ರಾಜೇಂದ್ರ ತೀರ್ಥಹಳ್ಳಿಯವರು ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200