ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜೂನ್ 2020
ಶಿವಮೊಗ್ಗ ನಗರದ ಮತ್ತೊಂದು ರಸ್ತೆ ಸೀಲ್ ಡೌನ್ ಮಾಡಲಾಗಿದೆ. ರಾಜೇಂದ್ರನಗರದ ಒಂದು ರಸ್ತೆಯನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜೇಂದ್ರನಗರ 1ನೇ ಅಡ್ಡರಸ್ತೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ.
ರಸ್ತೆಯಲ್ಲಿ ಜನ ಮತ್ತು ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಸೀಲ್ ಡೌನ್ ಪ್ರದೇಶದಲ್ಲಿರುವ ಮನೆಗಳು, ನಿವಾಸಿಗಳ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ.
ಮತ್ತೊಂದೆಡೆ ಸೀಲ್ ಡೌನ್ ಪ್ರದೇಶದಲ್ಲಿ ಸ್ಯಾನಿಟೈಸ್ ಮಾಡಲು ಪಾಲಿಕೆ ಸಿಬ್ಬಂದಿ ಸಿದ್ಧತೆ ನಡೆಸಿದ್ದಾರೆ. ಜಯನಗರ ಠಾಣೆ ಪೊಲೀಸ್ ಸ್ಥಳದಲ್ಲಿದ್ದಾರೆ.