ಶಿವಮೊಗ್ಗ ಲೈವ್.ಕಾಂ | SHIMOGA | 1 ನವೆಂಬರ್ 2019
ಶಿವಮೊಗ್ಗದಲ್ಲಿ ಇವತ್ತು 64ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜಾರೋಹಣ ಮಾಡಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200

ಪೊಲೀಸ್ ಡಿಎಆರ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಸಲಾಯಿತು. ಈ ವೇಳೆ KSRP ಮತ್ತು ಪೊಲೀಸ್ ಬ್ಯಾಂಡ್ ವತಿಯಿಂದ ಪಥ ಸಂಚಲನ ನಡೆಯಿತು.
ಬಳಿಕ ಶಿಕಾರಿಪುರ ಗಾಮದ ಚೌಡೇಶ್ವರಿ ಕಲಾ ಸಂಘದ ವತಿಯಿಂದ ಡೊಳ್ಳು ಕುಣಿತ, ಶಿವಮೊಗ್ಗ ಪೆರುಮಾಳ್ ನೃತ್ಯ ಕಲಾಕೇಂದ್ರದ ವತಿಯಿಂದ ಸಮೂಹ ನೃತ್ಯ, ಯಲವಟ್ಟಿ ಪಾರ್ವತಿ ಪರಮೇಶ್ವರ ವೀರಗಾಸೆ, ಬೆಳಲಕಟ್ಟೆ ರಂಗಮೋಹ ತಂಡದ ವತಿಯಿಂದ ಪಟಕುಣಿತ ನಡೆಯಿತು. ಈ ವೇಳೆ ವಿವಿಧ ಇಲಾಖೆಯಿಂದ ಸ್ಥಬ್ಧಚಿತ್ರ ಮೆರವಣಿಗೆ ನಡೆಯಿತು.
ವೇದಿಕೆ ಬಿಟ್ಟು ಹೋಗಿ ಫೋಟೊ ತೆಗೆಸಿಕೊಂಡ ಮಿನಿಸ್ಟರ್
ಕೆಎಸ್ಆರ್’ಟಿಸಿ ವತಿಯಿಂದ ವಿಭಿನ್ನವಾದ ಸ್ಥಬ್ಧಚಿತ್ರವನ್ನು ರೂಪಿಸಲಾಗಿತ್ತು. ಇದನ್ನು ಗಮನಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ವೇದಿಕೆಯಿಂದ ಕೆಳಗಿಳದು ಹೋಗಿ ಸ್ಥಬ್ಧಚಿತ್ರ ಮತ್ತು ಅದರಲ್ಲಿದ್ದ ಕಲಾವಿದರ ಜೊತೆಗೆ ನಿಂತು ಫೋಟೊ ಕ್ಲಿಕ್ಕಿಸಿಕೊಂಡರು. ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು, ಅಪರ ಜಿಲ್ಲಾಧಿಕಾರಿ ಅನುರಾಧ, ಸಿಇಒ ವೈಶಾಲಿ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಜನರಿಲ್ಲ, ಜನಪ್ರತಿಧಿಗಳು ಇಲ್ಲ
ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಈ ಬಾರಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಸಮಾರಂಭದಲ್ಲಿ ಸಾರ್ವಜನಿಕರ ಸಂಖ್ಯೆ ಬಹಳ ಕಡಿಮೆಯಿತ್ತು. ಶಾಲೆ, ಕಾಲೇಜು ವಿದ್ಯಾರ್ಥಿಗಳಷ್ಟೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮತ್ತೊಂದೆಡೆ ಜನಪ್ರತಿನಿಧಿಗಳು ಕೂಡ ರಾಜ್ಯೋತ್ಸವಕ್ಕೆ ಗೈರಾಗಿದ್ದು ಎದ್ದು ಕಾಣುತ್ತಿತ್ತು. ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ, ಪ್ರಸನ್ನಕುಮಾರ್, ಸಿ.ಎಂ.ಇಬ್ರಾಹಿಂ ಸೇರಿದಂತೆ ಹಲವರು ಗೈರಾಗಿದ್ದರು.





ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]