SHIVAMOGGA LIVE NEWS | 2 JULY 2024
SHIMOGA : ಹರಕೆರೆಯಲ್ಲಿ ನಿರ್ಮಿಸಿರುವ ಶ್ರೀ ಜಗದ್ಗುರು ರಂಭಾಪುರೀಶ (rambhapuri) ನಿವಾಸವನ್ನು ಜು.3ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಉದ್ಘಾಟಿಸಲಾಗುತ್ತದೆ ಎಂದು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜ್ಯೋತಿಪ್ರಕಾಶ್, ಜು.3ರಂದು ಬೆಳಗ್ಗೆ 11ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಕಟ್ಟಡ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸಮಾರಂಭ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಗೌರವಾಧ್ಯಕ್ಷ ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಮುಕ್ತಿಮಂದಿರ ಕ್ಷೇತ್ರದ ಶ್ರೀ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು ಎಂದರು.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಎಂಎಲ್ ಸಿಗಳಾದ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಪ್ರಮುಖರಾದ ಎಸ್ .ಪಿ.ದಿನೇಶ್, ರುದ್ರಮುನಿ ಎಸ್. ಸಜ್ಜನ್, ಸಿ.ಮಹೇಶ್ ಮೂರ್ತಿ ಮತ್ತಿತರರು ಭಾಗವಹಿಸುವರು ಎಂದರು.
ಭೂ ದಾನಿಗಳಾದ ಟಿ.ವಿ.ಈಶ್ವರಯ್ಯ ಸಹೋದರರು ಸೇರಿ ಗಣ್ಯರಿಗೆ ರಂಭಾಪುರಿ ಶ್ರೀಗಳು ಗುರುರಕ್ಷೆ ನೀಡುವರು. ಜು.2ರಂದು ಶಿವಮೊಗ್ಗದ ವೇ.ವಿರೂಪಾಕ್ಷಯ್ಯ ಶಾಸ್ತ್ರಿಗಳು ಮತ್ತು ಸಂಗಡಿಗರ ವೈದಿಕತ್ವದಲ್ಲಿ ನೂತನ ಕಟ್ಟಡದ ವಾಸ್ತು ಶಾಂತಿಪೂಜೆ ನಡೆಯಲಿದೆ ಎಂದರು.
ಇದನ್ನೂ ಓದಿ – ತುಂಗಾ ಮೇಲ್ದಂಡೆ ಯೋಜನೆ ನಾಲೆಗಳಿಗೆ ನಾಳೆಯಿಂದ ನೀರು
ಬಿಳಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಮಳಲಿಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಹೆಚ್.ವಿ.ಮರುಳೇಶ್, ಶಾಂತಾ ಆನಂದ, ಶಿವಕುಮಾರ್, ಶಿವಲಿಂಗಯ್ಯ, ಸಿ.ಎಚ್.ಬಾಳನಗೌಡ್ರ ಸುದ್ದಿಗೋಷ್ಠಿಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200