ಶಿವಮೊಗ್ಗ: ಮಂಡ್ಲಿಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಶಿಲಾ ದೇಗುಲ ಕಟ್ಟಡದ ಭೂಮಿಪೂಜೆ ಮತ್ತು ಧರ್ಮ ಜಾಗೃತಿ ಕಾರ್ಯಕ್ರಮಕ್ಕೆ ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ (seer) ಚಾಲನೆ ನೀಡಿದರು.
ರಂಭಾಪುರ ಶ್ರೀ ಏನೆಲ್ಲ ಹೇಳಿದರು?
ಭಾರತೀಯ ಸಂಸ್ಕೃತಿಯಲ್ಲಿ ದೇವಾಲಯಗಳು ಜಾಗೃತಿ ಮೂಡಿಸುವ ಆಧ್ಯಾತ್ಮ ಕೇಂದ್ರಗಳು. ಭಾವೈಕ್ಯ ಮತ್ತು ಸಂಸ್ಕೃತಿಯ ಸಂವರ್ಧನೆಗೆ ಇವು ಸ್ಫೂರ್ತಿಯ ಸೆಲೆ ಆಗಿವೆ.
ಸಾಮಾಜಿಕ ಸಂಪ್ರದಾಯಗಳು ಬದಲಾಗಬಹುದು. ಆದರೆ ನೈತಿಕ ನಿಯಮಗಳು ಶಾಶ್ವತ. ಮನುಷ್ಯನಿಗೆ ಅರಿವು-ಮರೆವು ಎರಡೂ ಇವೆ. ಅರಿವನ್ನು ಜಾಗೃತಗೊಳಿಸಲು ದೇವಸ್ಥಾನಗಳು ಅವಶ್ಯಕ.
ಕ್ರಿಯಾತ್ಮಕವಾದ ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ. ಮೂಲ ನಂಬಿಕೆಗಳನ್ನು ಮೂಢನಂಬಿಕೆಯೆಂದು ತಿಳಿಯದೇ ಅವುಗಳ ವಿಶಾಲ ಅರ್ಥ ತಿಳಿಯಲು ಪ್ರಯತ್ನ ಮಾಡಬೇಕಾಗಿದೆ. ತನಗಾಗಿ ಬಯಸುವುದು ಜೀವ ಗುಣ. ಎಲ್ಲರಿಗಾಗಿ ಬಯಸುವುದು ದೇವ ಗುಣವೆಂದು ಜಗದ್ಗುರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಸಮಾರಂಭದಲ್ಲಿ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ದಿಂಡದಹಳ್ಳಿ ಪಶುಪತಿ ಶಿವಾಚಾರ್ಯರು, ಬಿಳಿಕಿ ರಾಚೋಟೇಶ್ವರ ಶಿವಾಚಾರ್ಯರು, ಮಳಲಿ ಮಠದ ನಾಗಭೂಷಣ ಶಿವಾಚಾರ್ಯರು, ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಪಾಲ್ಗೊಂಡಿದ್ದರು.
ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಹೆಚ್.ವಿ. ಮಹೇಶ್ವರಪ್ಪ, ಸ್ವಾಗತ ಸಮಿತಿ ಸದಸ್ಯ ದಿವಾಕರ್, ಶಾಂತಾ ಆನಂದ ಇದ್ದರು.
ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200