SHIVAMOGGA LIVE NEWS, 16 JANUARY 2025
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಅಡಿಕೆ (Adike) ಬೆಳೆಗಾರರ ಸಮಾವೇಶದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ. ಕ್ಯಾನ್ಸರ್‌ಕಾರಕ ಅಂಶಗಳಿಲ್ಲ ಎಂದು ಘೋಷಿಸಬೇಕು ಎಂದು ಕೆಪಿಸಿಸಿ ವಕ್ತಾರ, ಜಿಲ್ಲೆ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಹೆಗ್ಡೆ, ನಾಲ್ಕು ಪ್ರಮುಖ ಪಾಯಿಂಟ್ ಪ್ರಸ್ತಾಪಿಸಿದರು.
ಹಾನಿಕರವಲ್ಲ ಎಂದು ಘೋಷಿಸಬೇಕು

ಅಡಿಕೆ ಸೇವನೆಯಿಂದ ಕ್ಯಾನ್ಸರ್ ಬರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ತನ್ನ ನಿಯತಕಾಲಿಕೆಯಲ್ಲಿ ಪ್ರಕಟಿಸಿದೆ. ಇದರಿಂದ ವಿಶ್ವಾದ್ಯಂತ ಅಡಿಕೆ ಕುರಿತು ತಪ್ಪು ಕಲ್ಪನೆ ಮೂಡಿಸಲಾಗುತ್ತಿದೆ. 2017ರಲ್ಲಿ ನರೇಂದ್ರ ಮೋದಿ ಸರ್ಕಾರದ ಆರೋಗ್ಯ ಸಚಿವ ಅನುಪ್ರಿಯಾ ಪಾಟೇಲ್, 2019ರಲ್ಲಿ ಅಶ್ವಿನ್ ಕುಮಾರ್ ಚೌಬೇ, ಅಡಿಕೆ ಕ್ಯಾನ್ಸರ್‌ಕಾರಕ ಎಂದು ಸಂಸತ್ತಿನಲ್ಲಿ ಲಿಖಿತ ಹೇಳಿಕೆ ನೀಡಿದ್ದಾರೆ. ಜಾರ್ಖಂಡ್‌ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅಡಿಕೆ ನಿಷೇಧಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಈಗ ಸಾಗರದಲ್ಲಿ ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಆಗಮಿಸುತ್ತಿರುವ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಸಂಶೋಧನಾ ಕೇಂದ್ರ, ಮಂಡಳಿ ಸ್ಥಾಪಿಸಿ
2018ರ ಚುನಾವಣೆ ಸಂದರ್ಭ ತೀರ್ಥಹಳ್ಳಿಯಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡುವುದಾಗಿ ಅಮಿತ್ ಷಾ ಘೋಷಿಸಿದ್ದರು. ಈತನಕ ಸಂಶೋಧನಾ ಕೇಂದ್ರದ ಕುರಿತು ಚಕಾರವಿಲ್ಲ. ಕಾಫಿ, ಸಾಂಬಾರು ಮಂಡಳಿಯಂತೆ ಅಡಿಕೆ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಕಳ್ಳ ಮಾರ್ಗ ತಡೆಯಲಿ

ದೇಶದಲ್ಲಿ ಸಾಕಷ್ಟು ಅಡಿಕೆ ದಾಸ್ತಾನು ಇದ್ದರು ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಬರ್ಮಾದಿಂದ ಕಳ್ಳ ಮಾರ್ಗದಲ್ಲಿ ಅಡಿಕೆ ಭಾರತಕ್ಕೆ ಬರುತ್ತಿದ್ದು, ತಡೆಯಲು ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಮೂಲಕ ಉತ್ತರ ಪ್ರದೇಶದ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ರಮೇಶ್ ಹೆಗ್ಡೆ ಆರೋಪಿಸಿದರು.

ಮನವರಿಕೆ ಮಾಡಿಕೊಡುವಲ್ಲಿ ವಿಫಲ
ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಅಡಿಕೆ ಕುರಿತು ಮಾತನಾಡುತ್ತಾರೆ. ಆದರೆ ಇಲ್ಲಿನ ಬಿಜೆಪಿ ಮುಖಂಡರು ಆಡಿಕೆಯ ಸಾಂಪ್ರದಾಯಿಕ ಮಹತ್ವ, ಔಷಧೀಯ ಗುಣಗಳ ಕುರಿತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ವಿಫಲವಾಗಿದ್ದಾರೆ. ಈಗ ಮ್ಯಾಮ್‌ಕೋಸ್ ಚುನಾವಣೆ ಸಂದರ್ಭ ಅಡಿಕೆ ಕುರಿತು ಪುನಃ ಚರ್ಚೆ ಆರಂಭಿಸಿದ್ದಾರೆ ಎಂದು ರಮೇಶ್ ಹೆಗ್ಡೆ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂತೆಕಡೂರು ವಿಜಯ್ ಕುಮಾರ್, ಇಕ್ಕೇರಿ ರಮೇಶ್, ಧರ್ಮಪ್ಪ, ಜಿ.ಡಿ.ಮಂಜುನಾಥ್, ದೇವಾನಂದ್, ಡಿ.ಸಿ.ನಿರಂಜನ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಲೆನಾಡು Start Up ಸಮ್ಮೇಳನ, ಉದ್ಘಾಟನೆಗೆ ಬರ್ತಿದ್ದಾರೆ ಕೇಂದ್ರ ಸಚಿವ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






