ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ (Rank) ಪಡೆದ ವಿದ್ಯಾರ್ಥಿನಿ ನಮನಾ.ಕೆ ಅವರಿಗೆ ಆರ್ಯ ಪಿ.ಯು. ಕಾಲೇಜಿನಲ್ಲಿ ಉಚಿತ ಸೀಟ್ ನೀಡಲಾಗಿದೆ. ಅಲ್ಲದೆ ದ್ವಿತೀಯ ಪಿ.ಯು ಕಾಲೇಜಿನಲ್ಲಿ ಟಾಪರ್ ಆಗುವವರಿಗೆ ಅಮೆರಿಕಾ ಪ್ರವಾಸಕ್ಕೆ ಕಳುಹಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನಮನಾ.ಕೆ 625 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಇಂದು ಆರ್ಯ ಪಿ.ಯು ಕಾಲೇಜಿನಲ್ಲಿ ನಮನಾ ಅವರಿಗೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಶಾಲೆ ಆರಂಭಿಸಿ 18 ವರ್ಷವಾಗಿದೆ. ಕಳೆದ ವರ್ಷ ಇಬ್ಬರು ವಿದ್ಯಾರ್ಥಿಗಳು ಕೇವಲ ಒಂದು ಅಂಕದಿಂದ ಪ್ರಥಮ ರ್ಯಾಂಕ್ ಪಡೆಯುವುದು ತಪ್ಪಿತ್ತು. ಈ ಬಾರಿ ನಮನಾ ಅವರು ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅವರಿಗೆ ನಮ್ಮದೆ ಆರ್ಯ ಪಿ.ಯು. ಕಾಲೇಜಿನಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ. ಮುಂದಿನ ವರ್ಷ ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಟಾಪರ್ ಆದವರಿಗೆ ಅಮೆರಿಕಾದ ನಾಸಾಗೆ ಪ್ರವಾಸ ಕರೆದೊಯ್ಯಲಾಗುತ್ತದೆ.
– ಎನ್.ರಮೇಶ್, ಶರಾವತಿ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ

ಶಾಲೆಯ ಶಿಕ್ಷಕರು, ಪೋಷಕರ ನೆರವಿನಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ಶಿಕ್ಷಕರು ಹೇಳಿಕೊಟ್ಟಿದ್ದನ್ನು ಅಂದೇ ಒಪ್ಪಿಸುತ್ತಿದ್ದೆ. ಕಷ್ಟಪಟ್ಟರೆ ಯಾವುದು ಕಷ್ಟವಲ್ಲ. ಮುಂದೆ ವೈದ್ಯೆಯಾಗುವ ಕನಸಿದೆ. ಆರ್ಯ ಪಿ.ಯು.ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸುತ್ತೇನೆ.
– ನಮನಾ.ಕೆ, ಪ್ರಥಮ ರ್ಯಾಂಕ್ ಪಡೆದ ವಿದ್ಯಾರ್ಥಿನಿ
ಡಿವಿಎಸ್ ಕಾಲೇಜು ನಿವೃತ್ತ ಪ್ರಾಂಶುಪಾಲ ರಂಗನಾಥಯ್ಯ, ನಿವೃತ್ತ ಪ್ರಾಧ್ಯಾಪಕ ಪದ್ಮನಾಭ, ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಸುನಿತಾ ದೇವಿ ಅವರು ನಮನಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಮನ ತಂದೆ ಕೃಷ್ಣಮೂರ್ತಿ, ತಾಯಿ ಪದ್ಮಿನಿ ಕಾರ್ಯಕ್ರಮದಲ್ಲಿ ಇದ್ದರು.
ಇದನ್ನೂ ಓದಿ » ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು


LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





