SHIVAMOGGA LIVE NEWS | 3 FEBRUARY 2023
SHIMOGA : ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಜಗದಲ್ಲಿ ರೋಗ ರುಜಿನಕ್ಕೆ ಶಿಕ್ಷಣವೇ ಮದ್ದು ಎಂದು ಐಪಿಎಸ್ ಅಧಿಕಾರಿ, ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ.ಡಿ.ಚನ್ನಣ್ಣನವರ್ ತಿಳಿಸಿದರು. (Ravi Channannavar)
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೋಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಮಯ ಮತ್ತು ಅವಕಾಶ ಬದುಕಿನಲ್ಲಿ ಅಮೂಲ್ಯ. ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಸಿಗುವ ಅವಕಾಶ ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ನಮ್ಮ ಓದಿನ ಹಪಾಹಪಿಯಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಹಿಂದೆ ಯಾಗಗಳ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆಶಿಸಲಾಗುತ್ತಿತ್ತು. ಇಂದು ವಿದ್ಯೆಯ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂಬ ಯಾಗ ನಡೆಯುತ್ತಿದೆ ಎಂದರು.
ಇದನ್ನೂ ಓದಿ – ಟ್ರಾಫಿಕ್ ದಂಡ 50% DISCOUNT, ಶಿವಮೊಗ್ಗದಲ್ಲಿ ಎಲ್ಲೆಲ್ಲಿ ದಂಡ ಕಟ್ಟಬಹುದು? ಎಷ್ಟು ದಿನ ಟೈಮ್ ಇದೆ?
ಪೋಲೀಸರಿಗೆ ಇರುವಷ್ಟು ಅವಕಾಶ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ. ಈ ಜಗತ್ತಿಗೆ ಶಾಂತಿಯ ಅವಶ್ಯಕತೆಯಿದೆ. ಅಂತಹ ಶಾಂತಿ ಮತ್ತು ಸುಭದ್ರತೆ ಕಾಪಾಡುವಲ್ಲಿ ಪೋಲೀಸರ ಪಾತ್ರ ಮಹತ್ವದ್ದು ಎಂದು ಹೇಳಿದರು.
ಕಿಯೋನಿಕ್ಸ್ ನಿಂದ ವಿವಿಧ ಕೋರ್ಸ್
ಕಿಯೋನಿಕ್ಸ್ ಸಂಸ್ಥೆಯಿಂದ ಐಐಟಿ ಐಐಎಂ ಪ್ರೊಫೆಸರ್ ಗಳಿಂದ ಕೃತಕ ಬುದ್ಧಿಮತ್ತೆ, ಐಓಟಿ, ಸೈಬರ್ ಸೆಕ್ಯುರಿಟಿ ಸೇರಿದಂತೆ ಅನೇಕ ತಾಂತ್ರಿಕ ಉನ್ನತ ಕೋರ್ಸ್ಗಳನ್ನು ಒದಗಿಸುತ್ತಿದೆ. ಈ ಮೂಲಕ ಸಾಮಾನ್ಯ ಮತ್ತು ಗ್ರಾಮೀಣ ಪ್ರದೇಶದ ಯುವ ಸಮೂಹದ ಸಬಲೀಕರಣ ಸಾಧ್ಯವಾಗಲಿದೆ. ಕಿಯೋನಿಕ್ಸ್ ಪೂರಕ ವೇದಿಕೆಗಳನ್ನು ಬಳಸಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಸಂಸ್ಥೆಯ ಆಯೋಜಕ ನಿರ್ದೇಶಕರಾದ ಕುಮಾರ್.ಪಿ, ಕೋರ್ಸ್ ನಿರ್ದೇಶಕ ಡಾ.ಸರೀತ್ ಕುಮಾರ್, ಜೆ.ಎನ್.ಎನ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಡಿವೈಎಸ್ಪಿ ಸುರೇಶ್, ಚಿರಾಗ್ ಇನ್ಫೊಟೆಕ್ ಗಿರೀಶ್.ಡಿ.ಪಿ, ಎಂಸಿಎ ವಿಭಾಗದ ನಿರ್ದೇಶಕರಾದ ಡಾ.ಪ್ರಭುದೇವ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಶ್ರೀಕಾಂತ್, ಸಹ ಪ್ರಾಧ್ಯಾಪಕರಾದ ಪ್ರಶಾಂತ್ ಅಂಕಲಕೋಟಿ, ವಿಕ್ರಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200