ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 09 FEBRUARY 2021
ಕೃಷಿ ಕಾಯ್ದೆ ರೈತರ ಒಳಿತಿಗಾಗಿ ಇದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರು ನಿಜವಾದ ರೈತರಲ್ಲ. ನೈಜ ಭಾರತೀಯರು ನಕಲಿ ರೈತರ ಹೋರಾಟಕ್ಕೆ ಬೆಂಬಲಿಸಬಾರದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ರೈತರ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದೇಶಿ ವ್ಯಕ್ತಿಗಳ ಕೈವಾಡ ಇರುವುದು ಬಹಿರಂಗವಾಗುತ್ತಿದೆ. ಪ್ರತಿಭಟನೆಯನ್ನು ವಿದೇಶಿಯರು ಹೈಜಾಕ್ ಮಾಡಿರುವುದು ಬಹಿರಂಗವಾಗಿದೆ ಎಂದರು.
ಮನಮೋಹನ್ ಸಿಂಗ್ ಪ್ರಸ್ತಾಪಿಸಿದ್ದರು
ಪ್ರಧಾನಿ ಆಗಿದ್ದ ವೇಳೆ ಮನಮೋಹನ್ ಸಿಂಗ್ ಅವರು ಕೃಷಿ ಕಾಯ್ದೆ ಕುರಿತು ಪ್ರಸ್ತಾಪ ಮಾಡಿದ್ದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಈ ಕುರಿತು ಪ್ರಸ್ತಾಪ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಕೃಷಿ ಕಾಯ್ದೆ ಕುರಿತು ವಿವರವಾಗಿ ಪ್ರಸ್ತಾಪಿಸಿದ್ದಾರೆ.
ಬಿಲ್ ಪಾಸ್ ವೇಳೆ ಸುಮ್ಮನಿದ್ದ ವಿಪಕ್ಷಗಳು
ಬಿಲ್ ಪಾಸ್ ಮಾಡುವ ಸಂದರ್ಭ ವಿಪಕ್ಷಗಳು ಸುಮ್ಮನಿದ್ದವು. ಈಗ ವಿಧ್ವಂಸಕ ಕೃತ್ಯ ನಡೆಸುತ್ತಿರುವ ವಿದ್ರೋಹಿಗಳ ಪ್ರತಿಭಟನೆ ಪರವಾಗಿ ವಹಿಸಿಕೊಂಡು ಮಾತನಾಡುತ್ತಿದ್ದಾರೆ. ರಾಜಕೀಯ ಬಣ್ಣ ಬಳಸಿ ವಿಪಕ್ಷಗಳು ಸುಮ್ಮನಿರುವುದು ಒಳ್ಳೆಯದಲ್ಲ ಎಂದರು.
ಮೇಯರ್ ಸುವರ್ಣಾ ಶಂಕರ್ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422