SHIVAMOGGA LIVE NEWS | RED ALERT | 19 ಮೇ 2022
ಶಿವಮೊಗ್ಗ ನಗರದಲ್ಲಿ ಇವತ್ತು ರೆಡ್ ಅಲರ್ಟ್ (RED ALERT) ಘೋಷಣೆ ಮಾಡಲಾಗಿದೆ. ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಇವತ್ತು ಇಡೀ ದಿನ ಭಾರಿ ಮಳೆಯಾಗುವ ಸಂಭವವಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಬೆಳಗ್ಗೆಯಿಂದ ಮಳೆ, ಶಿವಮೊಗ್ಗ ಸಿಟಿಯಲ್ಲಿ ಹೇಗಿತ್ತು ಪರಿಸ್ಥಿತಿ? ಇಲ್ಲಿದೆ ಫೋಟೊ ನ್ಯೂಸ್
ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಇವತ್ತು ಭಾರಿ ಮಳೆಯಾಗುವ ಸಾದ್ಯತೆ ಇದೆ. ಸುಮಾರು 10 ಸೆಂಟಿಮೀಟರ್’ನಿಂದ 15 ಸೆಂಟಿಮೀಟರ್’ನಷ್ಟು ಮಳೆ ಸುರಿಯುವ ಸಂಭವವಿದೆ ಎಂದು ಕೆಪಿಟಿಸಿಎಲ್ ಎಂ.ಆರ್.ಎಸ್. ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಆರ್.ಯೋಗೇಶ್ ತಿಳಿಸಿದ್ದಾರೆ.
ಎಷ್ಟೊತ್ತಿಗೆ ಜೋರು ಮಳೆಯಾಗುತ್ತೆ?
ಬೆಳಗ್ಗೆ 6 ಗಂಟೆಯಿಂದ 9 ಗಂಟೆವರೆಗೆ ಭಾರಿ ಮಳೆಯಾಗಲಿದೆ. 10 ಗಂಟೆ ಹೊತ್ತಿಗೆ ಮಳೆ ಪ್ರಮಾಣ ಸ್ವಲ್ಪ ತಗ್ಗಲಿದೆ. 12 ಗಂಟೆ ನಂತರವು ಮಳೆ ಪ್ರಮಾಣ ಕೊಂಚ ಇಳಿಕೆಯಾಗಲಿದೆ. ಮಧ್ಯಾಹ್ನ 3 ಗಂಟೆಯಿಂದ 4 ಗಂಟೆವರೆಗೂ ಭಾರಿ ಮಳೆಯಾಗುವ ಸಂಭವವಿದೆ. ಸಂಜೆ 5 ಗಂಟೆಗೂ ಹೆಚ್ಚು ಮಳೆ ಸುರಿಯಲಿದೆ. ರಾತ್ರಿ 7 ಗಂಟೆಯಿಂದ 11 ಗಂಟೆವರೆಗೆ ಜೋರು ಮಳೆಯಾಗಲಿದೆ.
ಮೇ 20ರಂದು ರಾತ್ರಿ 12 ಗಂಟೆಯಿಂದ 2 ಗಂಟೆವರೆಗೆ ಮಳೆಯಾಗಲಿದೆ. ಬೆಳಗ್ಗೆ 5 ಗಂಟೆಯಿಂದ 7 ಗಂಟೆವರೆಗೆ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಆ ಬಳಿಕ ಮಳೆ ಇರುವುದಿಲ್ಲ. ಆದರೆ ಮೋಡ ಕವಿದ ವಾತಾವರಣವಿರಲಿದೆ ಎಂದು ಕಾರ್ಯನಿರ್ವಾಹಕ ಎಂಜಿನಿಯರ್ ಯೋಗೇಶ್ ತಿಳಿಸಿದ್ದಾರೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.