SHIVAMOGGA LIVE NEWS | 15 FEBRUARY 2023
SHIMOGA : ಪ್ರಾಣಿಗಳ ಮಾರಾಟ ಮಳಿಗೆಗೆ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ (Registration) ಮಾಡಿಸುವುದು ಕಡ್ಡಾಯವಾಗಿದೆ. 30 ದಿನಗಳ ಒಳಗೆ ಅರ್ಜಿ ಸಲ್ಲಿಸಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆಯಬೇಕು. ಅದಕ್ಕೂ ಮುನ್ನ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ (ನಾಯಿತಳಿ ಸಂವರ್ಧನೆ ಮತ್ತು ಮಾರಾಟ ನಿಯಮ-2018 ಮತ್ತು ಮುದ್ದಿನ ಪ್ರಾಣಿಗ ಮಳಿಗೆ ನಿಯಮ-2018ರ ಸೆಕ್ಷನ್ 3,4 ಮತ್ತು 5ರ) ಅಡಿ ನೋಂದಣಿ (Registration) ಮಾಡಿಸುವುದು ಕಡ್ಡಾಯವಾಗಿದೆ.
ಇದನ್ನೂ ಓದಿ – ‘ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಎದುರು ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’
ಮಾರಟ ಮಳಿಗೆಯವರು ನಿಗದಿತ ನಮೂನೆ ಅರ್ಜಿಯನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆಯಬೇಕು. ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಭರ್ತಿ ಮಾಡಿದ ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳು ಹಾಗೂ ನಿಗದಿಪಡಿಸಿದ ಶುಲ್ಕದೊಂದಿಗೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ಅರ್ಜಿ ಸಲ್ಲಿಸಬೇಕು. ತಪ್ಪಿದಲ್ಲಿ ಅಂತಹವರ ವಿರುದ್ಧ ನಿಯಮಗಳನುಸಾರ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222969/ 221428 ಹಾಗೂ ವೆಬ್‍ಸೈಟ್ www.kawb.karnataka.nic.in ನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ – ಪಾಳು ಮನೆ ಮುಂದೆ ಅಸ್ವಸ್ಥಳಾಗಿ ಬಿದ್ದಿದ್ದ ಅಪರಿಚಿತ ಮಹಿಳೆ ಆಸ್ಪತ್ರೆಯಲ್ಲಿ ಸಾವು, ಕೈ ಮೇಲಿದೆ ‘ಪಾಪಿ ಪ್ರೀತಿ ಕಾವ್ಯ’ ಹಚ್ಚೆ

LATEST NEWS
- ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP







