ಸಾಮಾನ್ಯ ಗೃಹಿಣಿ ಈಗ ಶಿವಮೊಗ್ಗ ಪಾಲಿಕೆಯ ವಿರೋಧ ಪಕ್ಷದ ನಾಯಕಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | SHIMOGA | 25 ಜುಲೈ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಮಹಾನಗರ ಪಾಲಿಕೆ (MAHANAGARA PALIKE) ವಿರೋಧ ಪಕ್ಷದ (OPPOSITION LEADER) ನೂತನ ನಾಯಕಿಯಾಗಿ ಹೊಸಮನೆ ಬಡಾವಣೆ ಕಾರ್ಪೊರೇಟರ್ ರೇಖಾ ರಂಗನಾಥ್ ಅಧಿಕಾರ ಸ್ವೀಕರಿಸಿದ್ದಾರೆ. ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ರೇಖಾ ರಂಗನಾಥ್ ಅವರು ಅಧಿಕಾರ ಸ್ವೀಕರಿಸಿದರು.

Shimoga Nanjappa Hospital

ರೇಖಾ ರಂಗನಾಥ್ ಅವರು ಅಧಿಕಾರ ಸ್ವೀಕರಿಸುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.

ಶಾಸಕ ಕೆ.ಎಸ್.ಈಶ್ವರಪ್ಪ ಅವರು ಮಹಾನಗರ ಪಾಲಿಕೆಗೆ ಆಗಮಿಸಿ ರೇಖಾ ರಂಗನಾಥ್ ಅವರಿಗೆ ಅಭಿನಂದನೆ ತಿಳಿಸಿದರು.

ಸಾಮಾನ್ಯ ಗೃಹಿಣಿ ಈಗ ವಿಪಕ್ಷ ನಾಯಕಿ

ರೇಖಾ ರಂಗನಾಥ್ ಅವರ ಪತಿ ರಂಗನಾಥ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಪತಿ ರಾಜಕೀಯದಲ್ಲಿದ್ದರೂ ರೇಖಾ ರಂಗನಾಥ್ ಅವರು ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದು ಕಡಿಮೆ. ಸಾಮಾನ್ಯ ಗೃಹಿಣಿಯಾಗಿ ಮನೆ ಜವಾಬ್ದಾರಿ ನಿಭಾಯಿಸುತ್ತಿದ್ದರು.

ರೇಖಾ ರಂಗನಾಥ್ ಅವರು 2010ರಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಅಧ್ಯಕ್ಷರಾಗಿದ್ದರು. 2014ರಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷೆಯಾಗಿ ಜವಾಬ್ದಾರಿ ನಿಭಾಯಿಸಿದ್ದರು. ಈ ಭಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೊಸಮನೆ ಬಡಾವಣೆಯಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

‘ಚುನಾವಣೆ ಅನ್ನೋದು ನನಗೆ ಹೊಸತಲ್ಲ. ಈ ಹಿಂದೆ ಯುವ ಕಾಂಗ್ರೆಸ್’ನಲ್ಲಿ ಜವಾಬ್ದಾರಿ ನಿಭಾಯಿಸಿದ್ದೆ. ಆದರೆ ಹೊರಗೆ ಹೋಗಿ ಕೆಲಸ ಮಾಡಿದ್ದು ಕಡಿಮೆ. ಆಗ ಮಕ್ಕಳು ಸಣ್ಣವರಿದ್ದರು. ಈಗ ಮೂರು ವರ್ಷದಲ್ಲಿ ಮಹಾನಗರ ಪಾಲಿಕೆಯಲ್ಲಿ ಸಾಕಷ್ಟು ಅನುಭವವಾಗಿ. ಅದರ ಆಧಾರದ ಮೇಲೆ ವಿರೋಧ ಪಕ್ಷದ ನಾಯಕಿಯ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ರೇಖಾ ರಂಗನಾಥ್ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದರು.

ಮೂರು ಪಾಯಿಂಟ್ ಗುರಿ

ಇನ್ನು, ವಿರೋಧ ಪಕ್ಷದ ನಾಯಕಿ (OPPOSITION LEADER) ಎಂದು ಘೋಷಣೆ ಆಗುತ್ತಲೆ, ತಮ್ಮ ಅವಧಿಯಲ್ಲಿ ಮಾಡಬೇಕಿರುವ ಕೆಲಸಗಳ ಕುರಿತು, ರೇಖಾ ರಂಗನಾಥ್ ಅವರು ಸಿದ್ಧತೆ ಮಾಡಿಕೊಂಡಿದ್ದಾರೆ. ಮೂರು ಪ್ರಮುಖ ವಿಚಾರಗಳತ್ತ ಗಮನ ಹರಿಸಬೇಕಿದೆ ಎಂದು ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.

ವಿಚಾರ 1 – ವಿರೋಧ ಪಕ್ಷ ಜನರ ಧ್ವನಿಯಾಗಿರಬೇಕು. ಅದಕ್ಕೆ ತಕ್ಕ ಹಾಗೆ ಕೆಲಸ ಮಾಡುತ್ತೇವೆ. ಜನ ಸ್ನೇಹಿಯಾಗಿ ಕೆಲಸ ಮಾಡುತ್ತೇವೆ.

ವಿಚಾರ 2 – ಮೂಲ ಸೌಕರ್ಯದತ್ತ ಗಮನ ಹರಿಸಬೇಕಿದೆ. ಕೆಲವು ವಾರ್ಡ್’ಗಳು ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲಿದೆ. ಕೆಲವು ವಾರ್ಡ್’ಗಳು ಭಾಗಶಃ ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲಿವೆ. ಉಳಿದ ವಾರ್ಡ್’ಗಳು ಈ ಯೋಜನೆ ವ್ಯಾಪ್ತಿಯಲ್ಲಿಲ್ಲ. ಇಂತಹ ವಾರ್ಡ್’ಗಳಲ್ಲಿ ಮೂಲ ಸೌಕರ್ಯ ಒದಗಿಸಲು ಪ್ರಯತ್ನ ಮಾಡಬೇಕಿದೆ.

ವಿಚಾರ 3 – ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ಬಹಳ ಜನರಿಗೆ ಅಸಮಾಧಾನವಿದೆ. ಕಾಮಗಾರಿಗಳಲ್ಲಿ ಎಲ್ಲಿ ದೋಷವಾಗಿದೆ, ಜನರಿಗೆ ಅದರಿಂದ ಆಗುತ್ತಿರುವ ಕಿರಿಕಿರಿ ತಪ್ಪಿಸಲು ಪ್ರಯತ್ನ ಮಾಡುತ್ತೇನೆ.

Coroprator-Rekha-Ranganath-General-Image

ಹಿಂದಿನವರ ಮಾರ್ಗದರ್ಶನ

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ವಿರೋಧ ಪಕ್ಷವಾಗಿದೆ. ಈವರೆಗೂ ಕಾರ್ಪೊರೇಟರ್’ಗಳಾದ ರಮೇಶ್ ಹೆಗ್ಡೆ, ಹೆಚ್.ಸಿ.ಯೋಗೇಶ್, ಯಮುನಾ ರಂಗೇಗೌಡ ಅವರು ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ.

‘ಹಿಂದಿನವರು ಉತ್ತಮವಾಗ ಕಾರ್ಯ ನಿರ್ವಹಿಸಿದ್ದಾರೆ. ಅವರು ಅನುಭವದ ಮಾರ್ಗದರ್ಶನ ಪಡೆಯುತ್ತೇನೆ. ಜನರ ತೆರಿಗೆ ಹಣ ಪೋಲಾಗುವುದನ್ನು ತಡೆಯಲು ಪ್ರಯತ್ನ ಮಾಡುತ್ತೇನೆ’ ಎಂದು ರೇಖಾ ರಂಗನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ – ಗೋಪಿ ಸರ್ಕಲ್, ಜೈಲ್ ಸರ್ಕಲ್ ಸೇರಿ ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment