ಶಿವಮೊಗ್ಗ: ಭದ್ರಾ ಜಲಾಶಯದ ಬಲದಂಡೆ ನಾಲೆ ಒಡೆದು ನಡೆಸುತ್ತಿರುವ ಕಾಮಗಾರಿಯನ್ನು ಕೂಡಲೆ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಜೂನ್ 28ರಂದು ದಾವಣಗೆರೆ ನಗರ ಬಂದ್ (Bandh) ಆಚರಿಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.
ಶಿವಮೊಗ್ಗದ ಡಿ.ಎ.ಆರ್ ಮೈದಾನದಲ್ಲಿ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಬಲದಂಡೆ ನಾಲೆಯಲ್ಲಿ ಕಾಮಗಾರಿ ನಡೆಸುತ್ತಿರುವುರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಕೂಡಲೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಇವತ್ತು ಭದ್ರಾ ಜಲಾಶಯದ ಮುಂಭಾಗ ಹೋರಾಟ ನಡೆಸಿದೆವು. ಬುಧವಾರ ಬೆಳಗ್ಗೆ ದಾವಣಗೆರೆಯ ಬಾಡಾ ಕ್ರಾಸ್‌ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ಶನಿವಾರ ದಾವಣಗೆರೆ ನಗರ ಬಂದ್ ಆಚರಿಸಲಾಗುತ್ತದೆ. ವರ್ತಕರು ಇದಕ್ಕೆ ಸಹಕಾರ ನೀಡಬೇಕು. ರೈತರು ಹೋರಾಟಕ್ಕೆ ಕೈ ಜೋಡಿಸಬೇಕು ಎಂದು ರೇಣುಕಾಚಾರ್ಯ ಮನವಿ ಮಾಡಿದ್ದಾರೆ.
ಇನ್ನು, ಭದ್ರಾ ಬಲದಂಡೆ ನಾಲೆಯಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಮುತ್ತಿಗೆ ಹಾಕಲು ದಾವಣಗೆರೆ ರೈತರು ಯತ್ನಿಸಿದರು. ಈ ಸಂದರ್ಭ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ರೈತರನ್ನು ಪೊಲೀಸರು ವಶಕ್ಕೆ ಪಡೆದು, ಶಿವಮೊಗ್ಗದ ಡಿ.ಎ.ಆರ್ ಮೈದಾನಕ್ಕೆ ಕರೆತಂದಿದ್ದರು.
ಇದನ್ನೂ ಓದಿ » ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200