ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಸತಿ ಶಾಲೆಗಳ ನೌಕರರ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ (Protest) ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಬೋಧಕ, ಬೋಧಕೇತರ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪೈಲೆಟ್ ತರಬೇತಿ ಸಂಸ್ಥೆ, ಕನ್ನಡಿಗರಿಗೆ ಶೇ.25ರಷ್ಟು ಸೀಟ್, ಶುಲ್ಕ ವಿನಾಯಿತಿ
ನೆಹರು ಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ವಸತಿ ಶಿಕ್ಷಣ ನಿರ್ದೇಶನಾಲಯ ರಚಿಸಬೇಕು. ಇಲ್ಲವೆ ಎಸ್.ಸಿ, ಎಸ್.ಟಿ, ಬಿ.ಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು ಎಂದು ಆಗ್ರಹಿಸಿದರು.
ಕಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು. ಕಾಯಂ ನೌಕರರಿ ಶೇ.10ರಷ್ಟು ವಿಶೇಷ ಭತ್ಯೆ ಮಂಜೂರು ಮಾಡಿಸಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.





ಇದನ್ನೂ ಓದಿ » ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ, ಫೋಟೊಗ್ರಾಫರ್ ಕೊನೆಯುಸಿರು
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





